ದೇಶ

ಪಾಕ್ ನುಸುಳುವಿಕೆ ಯತ್ನ ವಿಫಲ: ಉಗ್ರರ ಶಿಬಿರ ಧ್ವಂಸ, ಭಾರತೀಯ ಸೇನೆಯಿಂದ ವಿಡಿಯೋ ಬಹಿರಂಗ!

Vishwanath S

ನವದೆಹಲಿ: ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಉಗ್ರರನ್ನು ಗಡಿ ನುಸುಳಲು ಸಹಕರಿಸುತ್ತಿದ್ದ ಪಾಕ್ ಸೇನಾ ನೆಲೆ ಮತ್ತು ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿರುವ ವಿಡಿಯೋವನ್ನು ಭಾರತೀಯ ಸೇನೆ ಬಹಿರಂಗಪಡಿಸಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಕೇರನ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಆಗಸ್ಟ್ ಮೊದಲ ವಾರದಲ್ಲಿ ಪಾಕಿಸ್ತಾನದ ಗಡಿ ಭದ್ರತಾ ಪಡೆ ಒಳನುಸುಳಿ ದಾಳಿ ನಡೆಸಲು ಯತ್ನಿಸಿದ್ದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ ಎಂದು ಎಎನ್ಐ ವರದಿ ಮಾಡಿದೆ. 

ಭಾರತೀಯ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪಾಕಿಸ್ತಾನ ಗಡಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ಶಿಬಿರಗಳ ಮೇಲೆ ಭಾರತೀಯ ಪಡೆ ದಾಳಿ ನಡೆಸಿರುವುದು ದಾಖಲಾಗಿದೆ. 

SCROLL FOR NEXT