ದೇಶ

ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ ಸೀಟಿಗೆ ಮೀಸಲಾತಿ: ಆದರೆ ಷರತ್ತುಗಳು ಅನ್ವಯ! 

Srinivas Rao BV

ವೈದ್ಯಕೀಯ ಶಿಕ್ಷಣ ಸೀಟುಗಳಿಗೆ ಸರ್ಕಾರಿ ಹಾಗೂ ಪುರಸಭೆ ನಿಗಮಗಳ ಕಾಲೇಜಿನಲ್ಲಿ ಮೀಸಲಾತಿ ನೀಡುವ ಮಸೂದೆ ಜಾರಿಗೊಳಿಸಲು ಮಹಾರಾಷ್ಟ್ರ ಕ್ಯಾಬಿನೆಟ್ ನಿರ್ಧರಿಸಿದೆ.

ಹೊಸ ಮಸೂದೆ ಜಾರಿಯಾದರೆ ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಶೇ.10 ರಷ್ಟು ಮೀಸಲಾತಿ ದೊರೆಯುತ್ತದೆ. ಆದರೆ ಇದಕ್ಕೆ ಕೆಲವು ನಿಬಂಧನೆಗಳನ್ನು ವಿಧಿಸಲಾಗಿದೆ. ಅದೇನೆಂದರೆ ದೀರ್ಘಾವಧಿ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವ ಇಚ್ಛೆಯಿಂದ ಸೇವೆ ಸಲ್ಲಿಸಲು ಮುಂದಾಗುವವರು ಮಾತ್ರ ಈ ಮೀಸಲಾತಿ ಅಡಿಯಲ್ಲಿ ಸರ್ಕಾರಿ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ. 

ಒಮ್ಮೆ ಸರ್ಕಾರಿ ಕಾಲೇಜಿನಲ್ಲಿ ಶೇ. 10 ರಷ್ಟು ಮೀಸಲಾತಿ  ಪಡೆದು ವ್ಯಾಸಂಗ ಮಾಡಿದವರು ಪದವಿ ಶಿಕ್ಷಣ ಪೂರ್ಣಗೊಳಿಸಿದ ನಂತರ 5 ವರ್ಷಗಳ ಕಾಲ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಲಿದೆ.
 
 

SCROLL FOR NEXT