ಸೊಪೋರ್ ಎನ್'ಕೌಂಟರ್: ಎಲ್ಇಟಿ ಉಗ್ರ ಆಸೀಫ್ ಹತ, ಇಬ್ಬರು ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಪಾಕಿಸ್ತಾನ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಪಾಕಿಸ್ತಾನ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಬಳಿಕ ಎನ್ ಕೌಂಟರ್ ನಡೆಸಲು ಆರಂಭಿಸಿದ ಸೇನಾಪಡೆ ಉಗ್ರನ ಗುಂಡಿಗೆ ದಿಟ್ಟ ಉತ್ತರ ನೀಡಿ, ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಪ್ರಸ್ತುತ ಬಂಧನಕ್ಕೊಳಗಾಗಿರುವ ಉಗ್ರನನ್ನು ಆಸೀಫ್ ಶಪಿ ಅಲಾಮ್ ಎಂದು ಗುರ್ತಿಸಲಾಗಿದ್ದು, ಈತ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನೆಂದು ಹೇಳಲಾಗುತ್ತಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಅಧಇಕಾರಿಗಳು ತಿಳಿಸಿದ್ದಾರೆ.
ಸಾವನ್ನಪ್ಪಿರುವ ಉಗ್ರ ಆಸೀಫ್, ಕೆಲ ದಿನಗಳ ಹಿಂದೆ ಸೊಪೋರ್ ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದ. ದಾಳಿಯಲ್ಲಿ ವ್ಯಾಪಾರಿ ಸೇರಿ ಮೂವರು ಗಾಯಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.