ಹೊಸ ಸಂಚಾರಿ ದಂಡ ತುಂಬಾ ಕಠಿಣವಾಗಿದೆ, ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸಲ್ಲ: ಮಮತಾ
ಸಂಚಾರಿ ನಿಯಮ ಉಲ್ಲಂಘನೆ ಭಾರೀ ದಂಡ ವಿಧಿಸಲಾಗುತ್ತಿರುವ ಕೇಂದ್ರ ಸರ್ಕಾರದ ನೂತನ ಮೋಟರ್ ವಾಹನ ಕಾಯ್ದೆನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ....
ಕೋಲ್ಕತಾ: ಸಂಚಾರಿ ನಿಯಮ ಉಲ್ಲಂಘನೆ ಭಾರೀ ದಂಡ ವಿಧಿಸಲಾಗುತ್ತಿರುವ ಕೇಂದ್ರ ಸರ್ಕಾರದ ನೂತನ ಮೋಟರ್ ವಾಹನ ಕಾಯ್ದೆನ್ನು ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಹೇಳಿದ್ದಾರೆ.
ಹೊಸ ಸಂಚಾರಿ ದಂಡ ತುಂಬಾ ಕಠಿಣವಾಗಿದೆ ಎಂದಿರುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಈ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ನಾವು ಈ ಹಿಂದೆಯೇ ಸಂಸತ್ತಿನಲ್ಲಿ ಮೋಟರ್ ವಾಹನ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿದ್ದೇವೆ. ಈಗ ಅದನ್ನು ಜಾರಿಗೊಳಿಸಿದರೆ ಸಾಮಾನ್ಯ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.
ಎಲ್ಲಾ ಸಮಸ್ಯೆಗಳಿಗೂ ದಂಡವೇ ಪರಿಹಾರ ಅಲ್ಲ. ಈ ವಿಚಾರವನ್ನು ಮಾನವೀಯ ದೃಷ್ಟಿಯಿಂದಲೂ ನೋಡಬೇಕಾಗುತ್ತದೆ ಎಂದು ದೀದಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.