ಕಾಂಗ್ರೆಸ್ ಗೆ ಕೈಕೊಟ್ಟ ಊರ್ಮಿಳಾ ಮಾತೋಂಡ್ಕರ್ 
ದೇಶ

ಕಾಂಗ್ರೆಸ್ ಗೆ ಮತ್ತೊಂದು ಆಘಾತ: 5 ತಿಂಗಳಿಗೆ 'ಕೈ' ಕೊಟ್ಟ ನಟಿ ಊರ್ಮಿಳಾ ಮಾತೋಂಡ್ಕರ್

ಮಹಾರಾಷ್ಟ್ರ ವಿಧಾನಸಭೆ ಘೋಷಣೆ ಸನಿಹದಲ್ಲೇ ಇರುವಾಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಮೂಲಕ ರಾಜಕೀಯ ಬದುಕಿಗೆ ಕಾಲಿಟ್ಟಿದ್ದ ಬಾಲಿವುಡ್‌ ನಟಿ ಊರ್ಮಿಳಾ ..

ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಘೋಷಣೆ ಸನಿಹದಲ್ಲೇ ಇರುವಾಗ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಮೂಲಕ ರಾಜಕೀಯ ಬದುಕಿಗೆ ಕಾಲಿಟ್ಟಿದ್ದ ಬಾಲಿವುಡ್‌ ನಟಿ ಊರ್ಮಿಳಾ ಮಾತೋಂಡ್ಕರ್‌ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. 

ಮುಂಬಯಿ ಕಾಂಗ್ರೆಸ್‌ನಲ್ಲಿನ ಆಂತರಿಕ ಕಲಹವೇ ತಾವು ಪಕ್ಷ ತೊರೆಯಲು ಕಾರಣ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ''ಮುಂಬಯಿ ಕಾಂಗ್ರೆಸ್‌ನ ಮುಖಂಡರಿಗೆ ಪಕ್ಷದಲ್ಲಿ ಬದಲಾವಣೆ ತರುವ ಇಚ್ಛಾಶಕ್ತಿ ಮತ್ತು ಸಾಮರ್ಥ್ಯ ಎರಡೂ ಇಲ್ಲ. ಕೆಲವು ಸ್ವಹಿತಾಸಕ್ತಿಗಳ ಆಂತರಿಕ ಕಲಹದಿಂದ ರಾಜಕೀಯ ಮತ್ತು ಸಾಮಾಜಿಕ ಬದುಕಿನಲ್ಲಿ ನಾನು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಮನವರಿಕೆಯಾಗಿದೆ. 

ಹೀಗಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದೇನೆ,'' ಎಂದು ಊರ್ಮಿಳಾ ತಿಳಿಸಿದ್ದಾರೆ. ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು ಬಿಜೆಪಿಯ ಗೋಪಾಲ ಶೆಟ್ಟಿ ವಿರುದ್ಧ ಭಾರಿ ಅಂತರದ ಸೋಲು ಕಂಡಿದ್ದರು. ಊರ್ಮಿಳಾ ಕೇವಲ 2,41,431 ಮತ ಗಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT