ಅರುಣ್ ಜೇಟ್ಲಿ 
ದೇಶ

ಅರುಣ್ ಜೇಟ್ಲಿ ಮೈದಾನವಾಗಿ ಬದಲಾಗಲಿದೆ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣ

ಭಾರತದ ಪ್ರಮುಖ ಕ್ರಿಕೆಟ್‌ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ. 

ನವದೆಹಲಿ: ಭಾರತದ ಪ್ರಮುಖ ಕ್ರಿಕೆಟ್‌ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್‌ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ. 

ಇತ್ತೀಚೆಗೆ ಅಗಲಿದ ಮಾಜಿ ಸಚಿವ ಅರುಣ್‌ ಜೇಟ್ಲಿ ಅವರ ಹೆಸರನ್ನು ದೆಹಲಿ ಕ್ರಿಕೆಟ್‌  ಕ್ರೀಡಾಂಗಣಕ್ಕೆ ಇಡಲು ದೆಹಲಿ ಕ್ರಿಕೆಟ್‌ ಮಂಡಳಿ ನಿರ್ಧರಿಸಿದೆ.

ಇಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಲಿದ್ದಾರೆ. 

ಕ್ರೀಡಾ ಸಚಿವ ಕಿರಣ್ ರಿಜುಜು, ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಸೇರಿದಂತೆ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರುಣ್‌ ಜೇಟ್ಲಿ ಅವರ ಕುಟುಂಬಿಕರು ಕೂಡಾ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!