ದೇಶ

ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ತಲುಪಿದರೂ ಕೇಂದ್ರಸರ್ಕಾರದಿಂದ ದ್ವೇಷದ ರಾಜಕೀಯ - ಸೋನಿಯಾ ಗಾಂಧಿ

Nagaraja AB

ನವದೆಹಲಿ:ದೇಶದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ತಲುಪಿದೆ ಆದರೆ, ಕೇಂದ್ರ ಸರ್ಕಾರ ದ್ವೇಷದ ರಾಜಕೀಯದಲ್ಲಿ ತೊಡಗಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಕ್ಷದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ಆರ್ಥಿಕ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ನಷ್ಟವೇ ಹೆಚ್ಚಾಗಿದೆ. ಆದಾಗ್ಯೂ, ಕೇಂದ್ರ ಸರ್ಕಾರ ಆರ್ಥಿಕ ಕುಸಿತದ ಕಡೆಗಿನ ಗಮನವನ್ನು ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ದ್ವೇಷದ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದರು.

 ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ. ಜನಾದೇಶ ದುರ್ಬಳಕೆ ಅಪಾಯಕಾರಿ ಪ್ಯಾಶನ್ ಆಗಿದೆ. ಗಾಂಧಿ, ಪಟೇಲ್, ಅಂಬೇಡ್ಕರ್  ಅವರಂತಹ ನಾಯಕರ  ಸಂದೇಶಗಳನ್ನು ತಪ್ಪಾಗಿ ಅರ್ಥೈಹಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದರು. 

SCROLL FOR NEXT