ದೇಶ

ಶಾರದಾ ಹಗರಣ; ಮಾಜಿ ಪೊಲೀಸ್ ಆಯುಕ್ತರಿಗೆ ನೀಡಿದ್ದ ರಕ್ಷಣೆ ಹಿಂಪಡೆದ ಹೈಕೋರ್ಟ್

Srinivasamurthy VN

ಕೋಲ್ಕತಾ: ಶಾರದಾ ಚಿಟ್ ಫಂಡ್ ಹಗರಣದ ಆರೋಪಿ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬಂಧಿಸದಂತೆ ನೀಡಿದ್ದ ರಕ್ಷಣೆಯನ್ನು ಕೋಲ್ಕತಾ ಹೈಕೋರ್ಟ್ ಶುಕ್ರವಾರ ಹಿಂಪಡೆದಿದೆ. ಇದರಿಂದ ರಾಜೀವ್ ಕುಮಾರ್ ಗೆ ಬಂಧನದ ಭೀತಿ ಎದುರಾಗಿದೆ. 

ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದರಿಂದ ಗೌರವ, ಘನತೆಗೆ ಧಕ್ಕೆಯಾಗಿದೆ. ಆದ್ದರಿಂದ ವಿಚಾರಣೆ ವೇಳೆ ತಮ್ಮನ್ನು ಬಂಧಿಸದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜೀವ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಧುಮಿತ ಮಿತ್ರಾ, ಕಾನೂನಿನಿಂದ ಯಾರೊಬ್ಬರೂ ದೊಡ್ಡವರಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸಿಬಿಐ ಅಧಿಕಾರಿಗಳು ಯಾವಾಗ ಬೇಕಾದರೂ ಅವರನ್ನು ವಿಚಾರಣೆಗೆ ಕರೆಯಬಹುದು ಎಂದು ಅಭಿಪ್ರಾಯಪಟ್ಟಿದೆ. 

ಸಿಬಿಐ ಪರ ವಕೀಲರು, ಆರೋಪಿ ಅನೇಕ ಸತ್ಯಾಂಶಗಳನ್ನು ಮುಚ್ಚಿಡಲು ಯತ್ನಿಸುತ್ತಿದ್ದು, ತನಿಖೆಗೆ ಸಹಕರಿಸುತ್ತಿಲ್ಲ . ಇದರಿಂದ ತನಿಖೆ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.  ಸಿಬಿಐ ಅಧಿಕಾರಿಗಳು ಶುಕ್ರವಾರ ರಾಜೀವ್ ಕುಮಾರ್ ಅವರನ್ನು ಶಾರದಾ ಹಾಗೂ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದರು. 

ಈ ಹಿಂದೆ ಸುಪ್ರೀಂ ಕೋರ್ಟ್ ಕೋಲ್ಕತಾ ಮಾಜಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಲು ಅವಕಾಶ ಕಲ್ಪಿಸಿತ್ತು.

SCROLL FOR NEXT