ಜಯಗೋಪಾಲ್ 
ದೇಶ

ಬ್ಯಾನರ್ ಬಿದ್ದು ಯುವತಿ ಸಾವು: ಎಐಎಡಿಎಂಕೆ ನಾಯಕನ ವಿರುದ್ಧ ಕೇಸ್ ದಾಖಲು

ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ  ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.

ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ  ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಎಸ್ ಜಯಗೋಪಾಲ್ ಅವರ ವಿರುದ್ಧ ಪಾಲಿಕರಣೈಯಲ್ಲಿ ಪೊಲೀಸರ್ ಎಫ್ಐಆರ್ ದಾಖಲಿಸಿದ್ದಾರೆ.

ಜಯಗೋಪಾಲ್ ಅವರು ತಮ್ಮ ಪುತ್ರನ ಮದುವೆಗಾಗಿ ಅಳವಡಿಸಿದ್ದ ಬ್ಯಾನರ್ ಕುಸಿದುಬಿದ್ದು ನಿನ್ನೆ ಶುಭಶ್ರೀ ಎಂಬ ಯುವತಿ ಮೃಪಟ್ಟಿದ್ದರು. 

ಶುಭಶ್ರೀ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬ್ಯಾನರ್ ಕುಸಿ ಬಿದ್ದಿದೆ. ಪರಿಣಾಮ ಶುಭಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿಯೊಂದು ಯುವತಿಯ ಮೇಲೆ ಹರಿದು ಹೋಗಿದೆ.

ಅನುಮತಿ ಪಡೆಯದೇ ಬ್ಯಾನರ್ ಹಾಕಿದ ಆರೋಪದ ಮೇಲೆ ಜಯಗೋಪಾಲ್ ಅವರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿದ್ದಾರೆ. 

ಈ ಮಧ್ಯೆ, ಮದ್ರಾಸ್ ಹೈಕೋರ್ಟ್ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಮತ್ತು ಮೃತ ಯುವತಿಯ ಪೋಷಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT