ಸಂಗ್ರಹ ಚಿತ್ರ 
ದೇಶ

ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್, ಇಬ್ಬರು ನಕ್ಸಲರು ಹತ

ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ದಂತೇವಾಡ: ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಛತ್ತೀಸ್ ಘಡದ ದಾಂತೇವಾಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿನ್ನೆ ತಡರಾತ್ರಿಯಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಈ ವೇಳೆ ಭದ್ರತಾ ಸಿಬ್ಬಂದಿಗಳ ಗುಂಡೇಟಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ. ಮೂಲಗಳ ಪ್ರಕಾರ ಇಲ್ಲಿನ ಕುಟ್ರೆಮ್ ಗ್ರಾಮದ ಕಿರಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಕುರಿತು ಮಾಹಿತಿ ಪಡೆದ ಪೊಲೀಸರು ಮತ್ತು ಸಿಆರ್ ಪಿಎಫ್ ಯೋಧರು ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ವೇಳೆ ಯೋಧರ ಆಗಮನವಾಗುತ್ತಲೇ ತಪ್ಪಿಸಿಕೊಳ್ಳುವ ಭರದಲ್ಲಿ ನಕ್ಸಲರು ಗುಂಡು ಹಾರಿಸಿದ್ದಾರೆ. 

ಭದ್ರತಾ ಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದು, ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ. ಅಂತೆಯೇ ಘಟನಾ ಪ್ರದೇಶದಲ್ಲಿದಲ್ಲಿ ನಕ್ಸರು ತಂದಿದ್ದ 2 ರೈಫಲ್ ಗಳು, 9ಎಂಎಂ ಪಿಸ್ತೋಲ್, 12 ಬೋರ್ ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಹಲವು ನಕ್ಸಲರು ಪರಾರಿಯಾಗಿದ್ದು, ಅವರ ಶೋಧಕ್ಕೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ದಾಂತೇವಾಡ ಎಸ್ ಪಿ ಅಭಿಷೇಕ್ ಪಲ್ಲವ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT