ದೇಶ

ನವೆಂಬರ್‌ನಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಡಾ. ಸುಬ್ರಮಣಿಯನ್ ಸ್ವಾಮಿ

Vishwanath S

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಬರುವ ನವೆಂಬರ್ ತಿಂಗಳಿನಿಂದ ಆರಂಭಗೊಳ್ಳಲಿದೆ ಎಂದು ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ವಿವಾದ ಕುರಿತು ವಿಚಾರಣೆ ನಡೆಯುತ್ತಿರುವ ಸುಪ್ರೀಂಕೋರ್ಟ್ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದಲ್ಲಿ  ದೇಗುಲ ನಿರ್ಮಾಣದ ಪರವಾಗಿ ತೀರ್ಪು ನೀಡುವ ಸಾಧ್ಯತೆ ಇದೆ ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದರು.  

ಪ್ರಾರ್ಥನೆ ಮಾಡುವ ಹಕ್ಕು ಸಂವಿಧಾನ ಪ್ರತಿಯೊಬ್ಬನಿಗೂ ನಾಗರಿಕನಿಗೆ ನೀಡಿರುವ ಮೂಲಭೂತ ಹಕ್ಕು ಅದನ್ನು ನಿರಾಕರಿಸುವ ಅಧಿಕಾರ ಯಾರಿಗೂ ಇಲ್ಲ. ರಾಮ ಜನ್ಮಭೂಮಿಯಲ್ಲಿರುವ ರಾಮ ದೇಗುಲವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಡಾ. ಸುಬ್ರಹ್ಮಣ್ಯಸ್ವಾಮಿ ಅವರು ತಮ್ಮ ಜನ್ಮದಿನ ಅಂಗವಾಗಿ ಅಯೋಧ್ಯೆಗೆ ಭೇಟಿ ಪ್ರಾರ್ಥನೆ ಸಲ್ಲಿಸಿದರು. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವ ಶಿವಸೇನೆಮುಖ್ಯಸ್ಥ ಮುಖ್ಯಸ್ಥ ಉದ್ಧವ್ ಠಾಕ್ರೆ, ರಾಮ ದೇಗುಲ ನಿರ್ಮಾಣವನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದ ಬೆನ್ನಲ್ಲೇ ಡಾ. ಸ್ವಾಮಿ ಈ ಆಗ್ರಹ ಮಾಡಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ಧತಿಯ ನಂತರ ರಾಮ ದೇವಾಲಯವನ್ನು ನಿರ್ಮಿಸುವ ಸಮಯ ಬಂದಿದೆ,  ಏಕರೂಪ ನಾಗರೀಕ ಸಂಹಿತೆಯ ಬಗ್ಗೆಯೂ ಕೇಂದ್ರ ಸರ್ಕಾರ ತ್ವರಿತ ನಿರ್ಧಾರ ತೆಗೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು  ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.

SCROLL FOR NEXT