ಸಾಂದರ್ಭಿಕ ಚಿತ್ರ 
ದೇಶ

ಮೇಲ್ಜಾತಿ ಯುವತಿಯೊಂದಿಗೆ ಸಂಬಂಧ: ಜೀವಂತವಾಗಿ ಸುಟ್ಟುಹೋದ ದಲಿತ ಯುವಕ

ಮೇಲ್ಜಾತಿಯ ಯುವತಿಯೊಂದಿಗೆ ಸಂಬಂಧ ಹೊಂದಿದ್ದ  20 ವರ್ಷದ ದಲಿತ ಯುವಕನೋರ್ವನನ್ನು ಆಕೆಯ ಸಂಬಂಧಿಕರು ಜೀವಂತವಾಗಿ  ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಘಾತದಿಂದ ಆತನ ತಾಯಿಯೂ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. 

ಹಾರ್ಡೊಯ್: ಮೇಲ್ಜಾತಿಯ ಯುವತಿಯೊಂದಿಗೆ ಸಂಬಂಧ ಹೊಂದಿದ್ದ  20 ವರ್ಷದ ದಲಿತ ಯುವಕನೋರ್ವನನ್ನು ಆಕೆಯ ಸಂಬಂಧಿಕರು ಜೀವಂತವಾಗಿ  ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಆಘಾತದಿಂದ ಆತನ ತಾಯಿಯೂ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. 

ಹಾರ್ಡೊಯ್ ಜಿಲ್ಲೆಯ ಬಾದೆಶಾ ಪ್ರದೇಶದಲ್ಲಿ ಶನಿವಾರ ಮಾರ್ಯಾದೆ ಹತ್ಯೆ ಪ್ರಕರಣ  ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ದಲಿತ ವ್ಯಕ್ತಿ ಅಭಿಷೇಕ್ ಆಲಿಯಾಸ್ ಮೊನು ಎಂಬಾತನನ್ನು ಚೆನ್ನಾಗಿ ಥಳಿಸಿ, ಮನೆಯೊಂದರಲ್ಲಿ ಕೂಡಿ ಹಾಕಿ ನಂತರ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಪ್ರಿಯದರ್ಶಿನಿ ಹೇಳಿದ್ದಾರೆ.

ಆತನ ಆಕ್ರಂದನ ಕೇಳಿ ಸ್ಥಳಕ್ಕೆ  ಆಗಮಿಸಿದ ಸ್ಥಳೀಯರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಲಖನೌ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ತೀವ್ರ ಗಾಯವಾಗಿ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಎಸ್ ಪಿ ಹೇಳಿದ್ದಾರೆ. ಈ ಆಘಾತದ ಸುದ್ದಿ ಕೇಳಿ ಆತನ ತಾಯಿಯೂ ಕೂಡಾ ಮೃತಪಟ್ಟಿದ್ದಾರೆ ಎಂದು ಮೊನು ಸಂಬಂಧಿಕರು ತಿಳಿಸಿದ್ದಾರೆ.

ಮೊನು ಮೇಲ್ಜಾತಿಯ ಯುವತಿಯೊಂದಿಗೆ ಸಂಬಂಧ ಹೊಂದಿದ್ದು, ಆಕೆಯನ್ನು ನೋಡಲು ಹೋದ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊನು ತನ್ನ ಅನಾರೋಗ್ಯಪೀಡಿತ ತಾಯಿಯ ಚಿಕಿತ್ಸೆಗಾಗಿ 25 ಸಾವಿರ ರೂ. ಹೊಂದಿಸಿ ಬರುತ್ತಿರುವಾಗ ಅಡ್ಡಗಟ್ಟಿದ್ದ ಯುವತಿಯ ಸಂಬಂಧಿಕರು ಆತನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಹಣವನ್ನು ಕಸಿದುಕೊಂಡು ಮನೆಯೊಂದರಲ್ಲಿ ಕೂಡಿಹಾಕಿ ಬೆಂಕಿ ಹಚ್ಚಿದ್ದಾರೆ ಎಂದು ಮೃತನ ಸಂಬಂಧಿ ರಾಜು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ ಯುವತಿಯ ಇಬ್ಬರು ಸಂಬಂಧಿಕರು ಸೇರಿದಂತೆ ಐವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಎಸ್ ಪಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ