ಉರ್ಮಿಳಾ ಮಾತೋಂಡ್ಕರ್ 
ದೇಶ

ಯಾವುದೇ ರಾಜಕೀಯ ಪಕ್ಷ ಸೇರಲ್ಲ- ಉರ್ಮಿಳಾ ಮಾತೋಂಡ್ಕರ್ 

ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಬಾಲಿವುಡ್ ನಟಿ, ರಾಜಕಾರಣಿ ಉರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳನ್ನು ಅಲ್ಲಗಳೆದಿರುವ ಉರ್ಮಿಳಾ, ತಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬೈ: ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದಿದ್ದ ಬಾಲಿವುಡ್ ನಟಿ, ರಾಜಕಾರಣಿ ಉರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ವದಂತಿಗಳನ್ನು ಅಲ್ಲಗಳೆದಿರುವ ಉರ್ಮಿಳಾ, ತಾನು ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ತೊರೆದ ನಂತರ ಉದ್ದವ್ ಠಾಕ್ರೆ ಆಪ್ತ ಮಿಲಿಂದಾ ನರ್ವೆಕರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಉರ್ಮಿಳಾ ಮಾತೋಂಡ್ಕರ್ ಈ ರೀತಿಯ ಹೇಳಿಕೆ ನೀಡಿದ್ದಾರೆ. 

ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಆಸೆಂಬ್ಲಿ ಚುನಾವಣೆ ನಡೆಯಲಿದ್ದು, ಉರ್ಮಿಳಾ ಶಿವಸೇನೆ ಸೇರಲಿದ್ದಾರೆ ಎಂಬಂತಹ ಮಾತುಗಳು  ಮುನ್ನೆಲೆಗೆ ಬಂದಿದ್ದವು. 

ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಚೊಚ್ಚಲ ಬಾರಿಗೆ ಸ್ಪರ್ಧಿಸಿದ್ದ ಉರ್ಮಿಳಾ ಬಿಜೆಪಿ ಅಭ್ಯರ್ಥಿ ಗೋಪಾಲ್ ಶೆಟ್ಟಿ ವಿರುದ್ಧ ಸೋತಿದ್ದರು. ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಸಮಸ್ಯೆಗಳಿಂದಾಗಿ ಇದೇ ತಿಂಗಳ 10 ರಂದು ಉರ್ಮಿಳಾ ಮಾತೋಂಡ್ಕರ್  ಗುಡ್ ಬೈ ಹೇಳಿದ್ದರು. 

ಇತರ ಯಾವುದೇ ಪಕ್ಷಗಳಿಗೂ ಸೇರಿಲ್ಲ. ಈ ರೀತಿಯ ಸುದ್ದಿಗಳನ್ನು ದಯವಿಟ್ಟು ಪ್ರಕಟಿಸಬೇಡಿ ಎಂದು ಮಾಧ್ಯಮಗಳಲ್ಲಿಉರ್ಮಿಳಾ ಮಾತೋಂಡ್ಕರ್ ಮನವಿ ಮಾಡಿಕೊಂಡರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!