ದೇಶ

ಪ್ರಧಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸೋನಿಯಾ

Nagaraja AB

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ 69ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶುಭಾಶಯ ಕೋರಿದ್ದಾರೆ.

ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಸಂದರ್ಭದಲ್ಲಿ  ಆರೋಗ್ಯವಂತರಾಗಿ, ಸಂತೋಷದಿಂದ ಧೀರ್ಘಕಾಲ ಬಾಳಿ ಎಂದು ಸೋನಿಯಾ ಗಾಂಧಿ ಹಾರೈಸಿದ್ದಾರೆ.

ರಾಜಕೀಯದಲ್ಲಿ ಪರಸ್ಪರ ವಿರುದ್ಧವಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಸೋನಿಯಾ ಗಾಂಧಿ ವೈಯಕ್ತಿಕವಾಗಿ ಪರಸ್ಪರ ಗೌರವ ಹೊಂದಿದ್ದಾರೆ.  

ಸೋನಿಯಾ ಗಾಂಧಿ ಹುಟ್ಟು ಹಬ್ಬದ ಸಂದರ್ಭದಲ್ಲೂ ಪ್ರಧಾನಿ ಮೋದಿ ಶುಭಾಶಯ ಕೋರುತ್ತಾರೆ.ಈಗ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಶುಭಾಶಯ ಕೋರುವ ಮೂಲಕ ರಾಜಕೀಯ ಬೇರೆ, ವೈಯಕ್ತಿಕತೆ ಬೇರೆ ಎಂಬುದನ್ನು ನಿರೂಪಿಸಿದ್ದಾರೆ.

SCROLL FOR NEXT