ದೇಶ

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಕೇಂದ್ರದಿಂದ ರಾಜಕೀಯ ಅವಕಾಶ: ರಾಹುಲ್ ಗಾಂಧಿ ಟೀಕೆ

Vishwanath S

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರಿಗೆ ಕೇಂದ್ರ ಸರ್ಕಾರ ರಾಜಕೀಯ ಜಾಗವನ್ನು ಸೃಷ್ಟಿಸಿಕೊಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಿಸಿದ್ದಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಲ್ಲಾ ರಾಷ್ಟ್ರೀಯವಾದಿ ನಾಯಕರನ್ನು ಕೇಂದ್ರ ಸರ್ಕಾರ ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಸರಣಿ ಟ್ವೀಟ್‌ಗಳಲ್ಲಿ ರಾಹುಲ್ ಒತ್ತಾಯಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸಲು ಫಾರೂಕ್ ಅಬ್ದುಲ್ಲಾ ಅವರಂತಹ ರಾಷ್ಟ್ರೀಯವಾದಿ ನಾಯಕರನ್ನು ಮುಗಿಸಲು ಸರ್ಕಾರ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ, ಈ ನಿರ್ವಾತವನ್ನು ಭಯೋತ್ಪಾದಕರಿಂದ ತುಂಬಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ. ಕಾಶ್ಮೀರವನ್ನು ಭಾರತದ ಉಳಿದ ಭಾಗಗಳನ್ನು ಧ್ರುವೀಕರಿಸಲು ರಾಜಕೀಯ ಸಾಧನವಾಗಿ ಶಾಶ್ವತವಾಗಿ ಬಳಸುವ ಸಾಧ್ಯತೆ ಇದೆ ಎಂದು ಅವರು ಟೀಕಿಸಿದ್ದಾರೆ.

SCROLL FOR NEXT