ಇ-ಸಿಗರೇಟ್ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಘೋಷಣೆ ಸಾಧ್ಯತೆ  
ದೇಶ

ಇ-ಸಿಗರೇಟ್ ನಿಷೇಧಕ್ಕೆ ಕೇಂದ್ರ ಸರ್ಕಾರ ಚಿಂತನೆ: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಘೋಷಣೆ ಸಾಧ್ಯತೆ 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೆ.18 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಹತ್ವದ ನಿರ್ಣಯಗಳು, ಸುಗ್ರೀವಾಜ್ಞೆಗಳ ನಿರೀಕ್ಷೆ ಇದೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೆ.18 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮಹತ್ವದ ನಿರ್ಣಯಗಳು, ಸುಗ್ರೀವಾಜ್ಞೆಗಳ ನಿರೀಕ್ಷೆ ಇದೆ. 

ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆಗಳಿ, ಮಾರಾಟಕ್ಕೆ ನಿಷೇಧ ವಿಧಿಸಲು ಕೇಂದ್ರ ಸಚಿವ ಸಂಪುಟ ಸಭೆ ಆದೇಶ ಹೊರಡಿಸಲಿದೆ ಎಂದು ರಾಷ್ಟ್ರೀಯ ಮಾಧ್ಯಮದ ವರದಿಯಿಂದ ತಿಳಿದುಬಂದಿದೆ. ಧೂಮಪಾನದ ಚಟ ಬಿಡುವುದಕ್ಕೆ ಸಹಕಾರಿ ಎಂದು ಹೇಳಲಾಗುವ ಇ-ಸಿಗರೇಟ್ ಗಳನ್ನು ವಿಶ್ವಾದ್ಯಂತ ಅಪಾಯವಿಲ್ಲದ ಸರಕೆಂದು ಪರಿಗಣಿಸಿ ಮಾರಾಟ ಮಾಡಲಾಗುತ್ತಿದೆ. 

ಆದರೆ ತಜ್ಞರ ಹೇಳಿಕೆಯ ಪ್ರಕಾರ ಇ-ಸಿಗರೇಟ್ ಗಳೂ ಆರೋಗ್ಯಕ್ಕೆ ಹಾನಿಕಾರಕವೇ ಆಗಿದೆ. ಈ ಹಿನ್ನೆಲೆಯಲ್ಲಿ ಇ-ಸಿಗರೇಟ್ ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

SCROLL FOR NEXT