ದೇಶ

ಅಲ್ಕಾ ಲಂಬಾ ಶಾಸಕತ್ವ ಅನರ್ಹಗೊಳಿಸಿದ ದೆಹಲಿ ಸ್ಪೀಕರ್

Lingaraj Badiger

ನವದೆಹಲಿ: ಆಮ್ ಆದ್ಮಿ ಪಕ್ಷದ ಮಾಜಿ ನಾಯಕಿ ಹಾಗೂ ದೆಹಲಿ ಚಾಂದಿನಿ ಚೌಕ್ ವಿಧಾನಸಭಾ ಕ್ಷೇತ್ರದ ಶಾಸಕಿ ಆಲ್ಕಾ ಲಂಬಾ ಅವರನ್ನು ಶಾಸಕತ್ವದಿಂದ ಅನರ್ಹಗೊಳಿಸಿ ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಇತ್ತೀಚಿಗಷ್ಟೇ ಆಪ್ ತೊರೆದು ಕಾಂಗ್ರೆಸ್ ಸೇರಿದ ಅಲ್ಕಾ ಲಂಬಾ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಅನರ್ಹಗೊಳಿಸಬೇಕು ಎಂದು ಆಪ್ ಶಾಸಕ ಸೌರಭ್ ಭಾರದ್ವಾಜ್ ಅವರು ಸ್ಪೀಕರ್ ಗೆ ದೂರು ನೀಡಿದ್ದರು.

ದೂರಿನ ವಿಚಾರಣೆ ನಡೆಸಿದ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು, ಲಂಬಾ ಅವರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.

ಇದಕ್ಕೆ ಮುನ್ನ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ನಾಲ್ವರು ಆಪ್ ಶಾಸಕರನ್ನು ಅನರ್ಹಗೊಳಿಸಲಾಗಿತ್ತು.

ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನಡೆ ವಿರುದ್ಧ ಅಸಮಾಧಾನ ಹೊಂದಿ, ಲೋಕಸಭಾ ಚುನಾವಣೆ ವೇಳೆ ಪ್ರಚಾರದಿಂದಲೂ ದೂರ ಉಳಿದಿದ್ದ ಅಲ್ಕಾ ಲಂಬಾ ಅವರು ಇತ್ತೀಚಿಗೆ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

SCROLL FOR NEXT