ಡಿ.ಕೆ.ಶಿವಕುಮಾರ್ ಕೇಸ್: ಇಡಿ ಅಧಿಕಾರಿಗಳ ಮುಂದೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಅವರನ್ನು ಆರ್ ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಇದೇ ವೇಳೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಿ ನಿರ್ದೇಶನದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಖಾನ್ ಮಾರುಕಟ್ಟೆಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖಾಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ,. ಶಿವಕುಮಾರ್ ಸೇರಿದಂತೆ ಇತರರು ನೀಡಿದ ಹೇಳಿಕೆ ನೀಡಬೇಕಾಗುತ್ತದೆ.
ಡಿಕೆ ಶಿವಕುಮಾರ್ ಅವರನ್ನು ಸೆಪ್ಚಂಬರ್ 3 ರಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು, ಅಕ್ಟೋಬರ್ 1 ರವರೆಗೆ ಶಿವಕುಮಾರ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.