ದೇಶ

ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆ ಬೆದರಿಕೆ ಹಾಕಿದ ನಂತರವೇ ಚಿನ್ಮಯಾನಂದ್ ರನ್ನು ಬಂಧಿಸಲಾಗಿದೆ: ಪ್ರಿಯಾಂಕಾ ಗಾಂಧಿ

Lingaraj Badiger

ನವದೆಹಲಿ: ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ್ ಅವರನ್ನು, ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ನಂತರವೇ ಸರ್ಕಾರ ಆರೋಪಿಯನ್ನು ಬಂಧಿಸಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಹೇಳಿದ್ದಾರೆ.

ಸಾರ್ವಜನಿಕರ ಮತ್ತು ಪತ್ರಿಕೋದ್ಯಮದ ಶಕ್ತಿಯಿಂದಾಗಿ ಚಿನ್ಮಯಾನಂದ್ ಅವರು ಇಂದು ಜೈಲು ಪಾಲಾಗಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರ್ಕಾರ ದಪ್ಪ ಚರ್ಮದ ಸರ್ಕಾರ. ಸಂತ್ರಸ್ತ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ನಂತರವೇ ಸರ್ಕಾರ ಕ್ರಮ ತೆಗೆದುಕೊಂಡಿದೆ. ಇದು ಸಾರ್ವಜನಿಕರ ಮತ್ತು ಪತ್ರಿಕೋದ್ಯಮದ ಶಕ್ತಿ ಎಂದು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವರು ಒಂದು ವರ್ಷಗಳ ಕಾಲ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಶೆಹಜಾನ್ಪುರದ ಕಾನೂನು ವಿದ್ಯಾರ್ಥಿನಿ ಆರೋಪಿಸಿದ್ದರು. ಈ ಸಂಬಂಧ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿ, ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ನಂತರವೂ ಆರೋಪಿಯನ್ನು ಬಂಧಿಸದಿರುವುದರ ಬಗ್ಗೆ ಸಂತ್ರಸ್ತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಅಂತಿಮವಾಗಿ ಇಂದು ಆರೋಪಿ ಚಿನ್ಮಯಾನಂದ್ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

SCROLL FOR NEXT