ಪ್ರಧಾನಿ ವಿರುದ್ಧದ ಅವಹೇಳನಕಾರಿ ಹೇಳಿಕೆ: ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್  
ದೇಶ

ಪ್ರಧಾನಿ ವಿರುದ್ಧದ ಅವಹೇಳನಕಾರಿ ಹೇಳಿಕೆ: ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಎರಡು ಪ್ರಕರಣಗಳಲ್ಲಿ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ ನೀಡಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಎರಡು ಪ್ರಕರಣಗಳಲ್ಲಿ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ ನೀಡಲಾಗಿದೆ.
 
ದೆಹಲಿ ಪೊಲೀಸರು ಮಣಿಶಂಕರ್ ಅಯ್ಯರ್ ಗೆ ಕ್ಲೀನ್ ಚಿಟ್ ನೀಡಿದ್ದಾರೆ. ಇದೇ ವೇಳೆ ಶಿಷ್ಟಾಚಾರ ಪಾಲಿಸದೇ ಪಾಕಿಸ್ತಾನದ ಅಧಿಕಾರಿಗಳನ್ನು ಭೇಟಿ ಮಾಡಿದ್ದ ಪ್ರಕರಣದಲ್ಲಿಯೂ ಕ್ಲೀನ್ ಚಿಟ್ ನೀಡಲಾಗಿದೆ.

ಮಣಿಶಂಕರ್ ಅಯ್ಯರ್ ವಿರುದ್ಧ ಅಡ್ವೊಕೇಟ್ ಹಾಗೂ ರಾಜಕಾರಣಿ ಅಜಯ್ ಅಗರ್ವಾಲ್, ಪ್ರಕರಣ ದಾಖಲಿಸಿದ್ದರು. ಆದರೆ ಪೊಲೀಸ್ ಇಲಾಖೆ ಎಟಿಆರ್ ನಲ್ಲಿ ಮಣಿಶಂಕರ್ ಅಯ್ಯರ್ ವಿರುದ್ಧದ ಪ್ರಕರಣಗಳನ್ನು ಕೈಬಿಡುವಂತೆ ಸೂಚನೆ ನೀಡಿದೆ. 

ಮಣಿಶಂಕರ್ ಅಯ್ಯರ್ ಉದ್ದೇಶಪೂರ್ವಕವಾಗಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿಲ್ಲ ಆದ್ದರಿಂದ ಮಣಿಶಂಕರ್ ಅಯ್ಯರ್ ವಿರುದ್ಧ ದೇಶದ್ರೋಹ ಅಥವಾ ಅವಹೇಳನಕಾರಿ ಹೇಳಿಕೆಯ ಆರೋಪ ಹೊರಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಗೆ ತಿಳಿಸಲಾಗಿದೆ. 2017 ರ ಡಿ.7 ರಂದು ನೀಚ್ ಆದ್ಮಿ ಎಂಬ ಹೇಳಿಕೆ ನೀಡಿದ್ದ ಮಣಿಶಂಕರ್ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. 2018 ರ ಆ.18 ರಂದು ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂಪಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ