ಸಂಗ್ರಹ ಚಿತ್ರ 
ದೇಶ

ಬಿರುಗಾಳಿಗೆ ತೀವ್ರವಾಗಿ ಅಲುಗಾಡಿದ ಏರ್ ಇಂಡಿಯಾ ವಿಮಾನಗಳು, ಭೀತಿಗೊಳಗಾದ ಪ್ರಯಾಣಿಕರು

ಬಿರುಗಾಳಿ ಪರಿಣಾಮ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತೀವ್ರವಾಗಿ ಅಲುಗಾಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದ ಘಟನೆ ಭಾನುವಾರ ನಡೆದಿದೆ.

ನವದೆಹಲಿ: ಬಿರುಗಾಳಿ ಪರಿಣಾಮ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ತೀವ್ರವಾಗಿ ಅಲುಗಾಡಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಭೀತಿಗೊಳಗಾದ ಘಟನೆ ಭಾನುವಾರ ನಡೆದಿದೆ. 

ದೆಹಲಿಯಿಂದ-ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸುಮಾರು 172 ಪ್ರಯಾಣಿಕರಿದ್ದರು. ವಿಮಾನ ಇದ್ದಕ್ಕಿದ್ದಂತೆ ಅಲುಗಾಡಿದ್ದರಿಂದ ಪ್ರಯಾಣಿಕರಿಗೆ ತಮ್ಮ ಜೀವವೇ ಬಾಯಿಗೆ ಬಂದಂತಾಗಿದೆ. ವಿಮಾನ ಅಲುಗಾಡಿದ ಪರಿಣಾಮ ಒಳಭಾಗದಲ್ಲಿ ಹಾನಿಗಳಾಗಿವೆ. ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆದ ಕಾರಣ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆಂದು ತಿಳಿದುಬಂದಿದೆ. 

ಎಐ-467 ವಿಮಾನ ದೆಹಲಿಯಿಂದ ವಿಜಯವಾಡಕ್ಕೆ ತೆರಳುವ ವೇಳೆ ಅಲುಗಾಡಿದೆ. ಅಲುಗಾಡಿದ ಪರಿಣಾಮ ವಿಮಾನದ ಹೊರಕವಚಕ್ಕೆ ಸ್ವಲ್ಪಮಟ್ಟಿಗೆ ಹಾನಿಯಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ, ವಿಮಾನವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ತನಿಖೆಗೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel