ದೇಶ

ನನ್ನನ್ನು ಜೈಲಿಗೆ ಕಳುಹಿಸಿದರೇ ಸಂತೋಷ ಪಡುವೆ: ಶರದ್ ಪವಾರ್

Shilpa D

ಮುಂಬೈ: ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿರುವ ಸಂಬಂಧ ಪ್ರತಿಕ್ರಿಯಿಸಿರುವ ಎನ್ ಸಿಪಿ ಮುಖಂಡ ಶರದ್ ಪವಾರ್ ಜೈಲಿಗೆ ಕಳುಹಿಸಿದರೇ ಸಂತೋಷದಿಂದ ಹೋಗುವುದಾಗಿ ತಿಳಿಸಿದ್ದಾರೆ, 

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಶರದ್ ಪವಾರ್ ವಿರುದ್ದ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ, ಜೈಲಿಗೆ ಹೋಗಲು ನನಗೇನು ತೊಂದರೆಯಿಲ್ಲ, ನಾನು ಯಾವತ್ತೂ ಈ ಅನುಭವವನ್ನು ಹೊಂದಿಲ್ಲ, ಆದ ಕಾರಣ ನಾನು ಸಂತೋಷ ಪಡುತ್ತೇನೆ ಎಂದು ತಿಳಿಸಿದ್ದಾರೆ.

ಶರದ್ ಪವಾರ್ ಅವರು ಸದಸ್ಯರಲ್ಲದ ಬ್ಯಾಂಕಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿದ್ದಕ್ಕಾಗಿ ಕೇಂದ್ರ ಸಂಸ್ಥೆಗೆ ಧನ್ಯವಾದ ಅರ್ಪಿಸಿದ್ದಾರೆ, ನಾನು ಹಗರಣದಲ್ಲಿ ಯಾವುದೇ ರೀತಿ ಭಾಗಿಯಾಗಿಲ್ಲ ಎಂದು ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ಘಟಕ ಶರದ್ ಪವಾರ್ ವಿರುದ್ದ ಇಡಿ ಪ್ರಕರಣ ದಾಖಲಿಸಿರುವುದನ್ನು ಸಮರ್ಥಿಸಿಕೊಂಡಿದೆ.ಹೀಗಾಗಿ ನಾನು ಅದನ್ನು  ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ತನ್ನ ವಿರುದ್ಧ ಯಾವುದೇ ರೀತಿಯ ಪ್ರಕರಣಗಳು ದಾಖಲಾಗಿದ್ದರು, ಅಕ್ಟೋಬರ್ 21 ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ನಲ್ಲಿನ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖಂಡ ಶರದ್ ಪವಾರ್ ಮತ್ತು ಅವರ ಸೋದರಳಿಯ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ಹಣಕಾಸು ಅವ್ಯವಹಾರ ಪ್ರಕರಣವನ್ನು ದಾಖಲಿಸಿಕೊಂಡಿತ್ತು.
 

SCROLL FOR NEXT