ಅಜಿತ್ ಪವಾರ್ 
ದೇಶ

ಶಾಸಕ ಸ್ಥಾನಕ್ಕೆ ಎನ್ ಸಿಪಿ ಮುಖಂಡ ಅಜಿತ್ ಪವಾರ್ ರಾಜೀನಾಮೆ

ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ಅಚ್ಚರಿಯ ಬೆಳವಣಿಗೆಯಲ್ಲಿ, ಎನ್ ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಜಿತ್ ಪವಾರ್ ಅವರು ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸ್ಪೀಕರ್ ಹರಿಭಾವು ಬಗಡೆ ಅವರು ಖಚಿತಪಡಿಸಿದ್ದಾರೆ.

ಅಜಿತ್ ಪವಾರ್ ಅವರು ನನಗೆ ಕರೆ ಮಾಡಿದ್ದರು ಮತ್ತು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಬಳಿಕ ನನಗೆ ರಾಜೀನಾಮೆ ಪತ್ರ ನೀಡಿದ್ದು, ಅದನ್ನು ನಾನು ಅಂಗೀಕರಿಸಿದ್ದೇನೆ. ಆದರೆ ರಾಜೀನಾಮೆಗೆ ಅವರು ಯಾವುದೇ ಕಾರಣ ನೀಡಿಲ್ಲ ಎಂದು ಬಗಡೆ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್(ಎಂಎಸ್ಎ ಬ್ಯಾಂಕ್) ನಿರ್ದೇಶಕರಾಗಿದ್ದಾಗ 25 ಸಾವಿರ ಕೋಟಿ ರೂಪಾಯಿ ಹಗರಣ ನಡೆದಿತ್ತು. ಈ ಹಗರಣದಲ್ಲಿ ಅವರ ಅಂಕಲ್ ಶರದ್ ಪವಾರ್ ಅವರ ಹೆಸರೂ ಸಹ ಕೇಳಿಬಂದಿತ್ತು. ಈಗ ಅಜಿತ್ ಪವಾರ್ ಅವರ ದಿಢೀರ್ ರಾಜೀನಾಮೆ ನಿರ್ಧಾರಕ್ಕೆ ಈ ಹಗರಣ ಕಾರಣ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT