ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಜಮ್ಮು-ಕಿಶ್ವತ್ವಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ. 

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಜಮ್ಮು-ಕಿಶ್ವತ್ವಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ಶನಿವಾರ ತಿಳಿದುಬಂದಿದೆ. 

ರಂಬನ್ ಜಿಲ್ಲೆಯ ಬಟೊಟೆ ಹೆದ್ದಾರಿಯಲ್ಲಿ ಇಬ್ಬರು ಉಗ್ರರು ಓಡಾಡುತ್ತಿದ್ದಾರೆಂದು ನಾಗರೀಕ ವಾಹನದ ಚಾಲಕನೊಬ್ಬ ಮಾಹಿತಿ ನೀಡಿದ್ದ. ಈ ವೇಳೆ ಸ್ಥಳಕ್ಕೆ ಸೇನಾಪಡೆಗಳು ತೆರಳುತ್ತಿದ್ದಂತೆಯೇ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಕೂಡಲೇ ಸೇನಾಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಆರಂಭಿಸಿದೆ. 

ಇದೀಗ ಸ್ಥಳದಲ್ಲಿ ಉಗ್ರರು ಹಾಗೂ ಸೇನೆ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದ್ದು, ಉಗ್ರರ ಗುಂಡಿನ ದಾಳಿಗೆ ಸೇನೆ ದಿಟ್ಟ ಉತ್ತರ ನೀಡುತ್ತಿದೆ. ಸ್ಥಳದಲ್ಲಿ ಇಬ್ಬರು ಉಗ್ರರು ಇರುವುದಾಗಿ ವರದಿಗಳು ತಿಳಿಸಿವೆ. 


ಇಂದು ಬೆಳಿಗ್ಗೆ 7.30ರ ಸುಮಾರಿಗೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಹೆದ್ದಾರಿಯಲ್ಲಿ ನಾಗರೀಕ ವಾಹನವನ್ನು ತಡೆಯಲು ಯತ್ನಿಸಿದ್ದಾರೆ. ಆದರೆ, ಚಾಲಕ ವಾಹನವನ್ನು ನಿಲ್ಲಿಸದೆ ಸೇನಾಪಡೆಗಳಿದ್ದ ಸ್ಥಳಕ್ಕೆ ಬಂದು ಉಗ್ರರ ಬಗ್ಗೆ ಮಾಹಿತಿ ನೀಡಿದ್ದಾರೆಂದು ಸೇನಾಧಿಕಾರಿ ಮಾಹಿತಿ ನೀಡಿದ್ದಾರೆ. 

ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಲಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಕಾರ್ಯಾಚರಣೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಕಾರ್ಯಾಚರಣೆ ಹಿನ್ನಲೆಯಲ್ಲಿ ಹೆದ್ದಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!