ಸಂತ್ರಸ್ತೆ 
ದೇಶ

ಚಿನ್ಮಯಾನಂದ್ ವಿರುದ್ಧ ರೇಪ್ ಕೇಸ್ ದಾಖಲಿಸುವಂತೆ ಬಂಧಿತ ಕಾನೂನು ವಿದ್ಯಾರ್ಥಿನಿ ಆಗ್ರಹ

ಸುಲಿಗೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಎಲ್ಎಲ್ಎಂ ವಿದ್ಯಾರ್ಥಿನಿ, ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಕೋರಿ ಜಿಲ್ಲಾ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಲಖನೌ: ಸುಲಿಗೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಎಲ್ಎಲ್ಎಂ ವಿದ್ಯಾರ್ಥಿನಿ, ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ಚಿನ್ಮಯಾನಂದ್ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಕೋರಿ ಜಿಲ್ಲಾ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಮಧ್ಯೆ, ಪ್ರಕರಣ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಐದು ಕೋಟಿ ಹಣ ನೀಡುವಂತೆ ಒತ್ತಾಯಿಸಿ ಚಿನ್ಮಯಾನಂದ್ ಅವರಿಗೆ ಸಂದೇಶ ಕಳುಹಿಸಿದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದೆ.

ನಾನು ಚಿನ್ಮಯಾನಂದ್ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದರೂ, ಎಸ್ಐಟಿ ಈ ಬಗ್ಗೆ ತನಿಖೆ ನಡೆಸುತ್ತಿಲ್ಲ ಎಂದು ಕಾನೂನು ವಿದ್ಯಾರ್ಥಿನಿ ದೂರಿದ್ದಾರೆ. ಅಲ್ಲದೆ ಚಿನ್ಮಯಾನಂದ್ ಅವರ ವಿರುದ್ಧ ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಎಸ್ಐಟಿ, ನಾನು ದೆಹಲಿ ಪೊಲೀಸರಿಗೆ ನೀಡಿದ ಹೇಳಿಕೆಯ ಪ್ರಕಾಾರ ಚಿನ್ಮಯಾನಂದ್ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಲ್ಲ ಮತ್ತು ಈ ಬಗ್ಗೆ ತನಿಖೆಯೂ ನಡೆಸುತ್ತಿಲ್ಲ ಎಂದು ಸಂತ್ರಸ್ತ ಯುವತಿ ಇಂದು ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ದೂರಿದ್ದಾರೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಸಂತ್ರಸ್ತ ಕಾನೂನು ವಿದ್ಯಾರ್ಥಿನಿ, ಮಾಜಿ ಕೇಂದ್ರ ಸಚಿವರ ವಿರುದ್ಧ ಅತ್ಯಾಚಾರ ಪ್ರಕರಣ ವಾಪಸ್ ಪಡೆಯಲು 5 ಕೋಟಿ ರೂ. ಹಣ ಕೇಳಿದ್ದರು ಎಂದು ಆರೋಪಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್