ರತ್ಮಾಕರ್ ಮೃತದೇಹ 
ದೇಶ

ತನ್ನನ್ನು ಬಿಟ್ಟು ಮತ್ತೊಬ್ಬಳ ಜೊತೆ ಚಕ್ಕಂದವಾಡುತ್ತಿದ್ದ ಪತಿಗೆ ಒನಕೆಯಿಂದ ಹೊಡೆದು ಬರ್ಬರ ಹತ್ಯೆ!

ಮದುವೆಯಾಗಿ ಮಗುವಾದ ನಂತರ ಮತ್ತೊಬ್ಬಳ ಜೊತೆ ಚಕ್ಕಂದವಾಡುತ್ತಿದ್ದ ಪತಿಯ ವರ್ತನೆಯಿಂದ ರೋಸಿ ಹೋದ ಪತ್ನಿಯೊರ್ವಳು ಒನಕೆಯಿಂದ ಆತನ ತಲೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಗುಂಟೂರು: ಮದುವೆಯಾಗಿ ಮಗುವಾದ ನಂತರ ಮತ್ತೊಬ್ಬಳ ಜೊತೆ ಚಕ್ಕಂದವಾಡುತ್ತಿದ್ದ ಪತಿಯ ವರ್ತನೆಯಿಂದ ರೋಸಿ ಹೋದ ಪತ್ನಿಯೊರ್ವಳು ಒನಕೆಯಿಂದ ಆತನ ತಲೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪನುಮಾಕು ಗ್ರಾಮದ ರತ್ಮಾಕರ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ತಿಳಿದ ಪತ್ನಿ ಪತಿಯನ್ನು ಪ್ರಶ್ನಿಸಿದ್ದಾಳೆ. ಈ ವೇಳೆ ಪತಿ ನನ್ನ ಇಷ್ಟ ಏನು ಬೇಕಾದರೂ ಮಾಡುತ್ತೇನೆ. ನೀನು ಯಾರು ಎಂದು ಪ್ರಶ್ನಿಸಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ಮನೆಯಲ್ಲಿದ್ದ ಒನಕೆಯಿಂದ ಪತಿಯ ತಲೆಗೆ ಹೊಡೆದಿದ್ದಾಳೆ. 

ಒನಕೆಯ ಹೊಡೆತಕ್ಕೆ ರತ್ಮಾಕರ್ ತಲೆ ಸೀಳಾಗಿದೆ. ತೀವ್ರ ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ. ನಂತರ ರತ್ಮಾಕರ್ ಪತ್ನಿ ಮಗುವಿನೊಂದಿಗೆ ಪೊಲೀಸ್ ಠಾಣೆಗೆ ತೆರಳಿ ನಡೆದ ವಿಚಾರವನ್ನು ತಿಳಿಸಿ ಶರಣಾಗಿದ್ದಾಳೆ. 

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!