ರಾಜಸ್ತಾನ್ ದರ್ಗಾದಲ್ಲಿ ಸೇರಿದ್ದ ಗುಂಪನ್ನು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ
ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರೂ ರಾಜಸ್ತಾನದ ಅಜ್ಮೀರ್ ಜಿಲ್ಲೆಯ ಸರ್ವಾರ್ ಪಟ್ಟಣದ ದರ್ಗಾದಲ್ಲಿ ಸುಮಾರು ಮಂದಿ ಸೇರಿದ್ದರು, ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಜೈಪುರ: ಕೊರೋನಾ ವೈರಸ್ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರೂ ರಾಜಸ್ತಾನದ ಅಜ್ಮೀರ್ ಜಿಲ್ಲೆಯ ಸರ್ವಾರ್ ಪಟ್ಟಣದ ದರ್ಗಾದಲ್ಲಿ ಸುಮಾರು 100 ಮಂದಿ ಸೇರಿದ್ದರು, ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ,ಮಾರ್ಚ್ ತಿಂಗಳ ಕೊನೆಯಂದು ಅಜ್ಮೀರ್ ದರ್ಗಾದ ಸೂಫಿ ಸಂತರಿಗೆ ಚಾದರ ಸಲ್ಲಿಸುವುದು ವಾಡಿಕೆ, ಅದರಂತೆ ದರ್ಗಾದಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು.
ಈ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಅಜ್ಮೀರ್ ಎಸ್ ಪಿ ಕೇವಲ 5 ಮಂದಿಗೆ ಅನುಮತಿ ನೀಡಿದ್ದರು, ಆದರೆ ನಿಮ ಉಲ್ಲಂಘಿಸಿ 100ಕ್ಕೂ ಹೆಚ್ಚು ಮಂದಿ ಸೇರಿದ್ದರು. ಅವರನ್ನೆಲ್ಲಾ ಜಾಗ ಬಿಟ್ಟು ತೆರಳುವಂತೆ ಪೊಲೀಸರು ಸೂಚಿಸಿದರು,ಆದರೆ ಕೆಲವರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದರಿಂದ ಅವರನ್ನು ಚದುರಿಸಲು ಲಘು ಲಾಠಿ ಪ್ರಹಾರನಡೆಸಿದ್ದಾರೆ ಎನ್ನಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.