ಮುಂಬೈನಲ್ಲಿ ವೈರಸ್ ನಿರೋಧಕ ಔಷಧಿ ಸಂಪಡಿಕೆ 
ದೇಶ

ಕೊರೋನಾ ವೈರಸ್; ಮುಂಬೈ, ತೆಲಂಗಾಣದಲ್ಲಿ 4 ಸೋಂಕಿತರ ಬಲಿ, ಸಾವಿನ ಸಂಖ್ಯೆ 59ಕ್ಕೇರಿಕೆ, 2000ಗಡಿಯತ್ತ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದಲ್ಲಿ ಮತ್ತೋರ್ವ ಕೊರೋನಾ ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ್ದು, ತೆಲಂಗಾಣದಲ್ಲಿ ಮತ್ತೆ ಮೂವರು ಸೋಂಕಿತರು ಸಾವನ್ನಪ್ಪುವ ಮೂಲಕ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಮತ್ತೋರ್ವ ಕೊರೋನಾ ಸೋಂಕು ಪೀಡಿತ ವ್ಯಕ್ತಿ ಸಾವನ್ನಪ್ಪಿದ್ದು, ತೆಲಂಗಾಣದಲ್ಲಿ ಮತ್ತೆ ಮೂವರು ಸೋಂಕಿತರು ಸಾವನ್ನಪ್ಪುವ ಮೂಲಕ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನ ಬಹುದೊಡ್ಡ ಸ್ಲಂ ಪ್ರದೇಶ ಧಾರಾವಿಯಲ್ಲಿ ಮೊದಲ ಸೋಂಕು ಪ್ರಕರಣ ಪತ್ತೆಯಾಗಿತ್ತು. ಇದೀಗ ಅದೇ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇಂದು ಧಾರಾವಿಯಲ್ಲಿ ಮೊದಲ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ ಸೋಂಕಿತನನ್ನು ಇಂದು ಸಂಜೆ ಸ್ಥಳೀಯ ಸಿಯಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಇನ್ನು ಮೃತ ವ್ಯಕ್ತಿಯ ಕುಟುಂಬಸ್ಥರು ಮತ್ತು ಅವರ ನಿವಾಸದ ಸುತ್ತಮುತ್ತಲಿನ 7 ಕುಟುಂಬಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಮೂಲಗಳ ಪ್ರಕಾರ ಸೋಂಕಿತ ವ್ಯಕ್ತಿ ಇದ್ದ ಬಿಲ್ಡಿಂಗ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ಬಫರ್ ಜೋನ್ ಎಂದು  ಘೋಷಣೆ ಮಾಡಿದ್ದಾರೆ. 

ಮೃತ 46 ವರ್ಷದ ವ್ಯಕ್ತಿ ಯಾವುದೇ ರೀತಿಯ ವಿದೇಶ ಪ್ರಯಾಣ ಮಾಡಿರಲಿಲ್ಲ. ಧಾರಾವಿಯ ಎಕಿಜಿ ನಗರದ ಟೈಲರಿಂಗ್ ಅಂಗಡಿ ಇಟ್ಟುಕೊಂಡಿದ್ದ. ಅಲ್ಲಿಂದಲೇ ಈತನಿಗೆ ಸೋಂಕು ತಗುಲಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದಲ್ಲಿ ಮತ್ತೆ ಮೂರು ಸಾವು
ಇನ್ನು ಮುಂಬೈನಂತೆಯೇ ತೆಲಂಗಾಣದಲ್ಲೂ ಮತ್ತೆ ಮೂವರು ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅಂತೆಯೇ ಸೋಂಕಿತರ ಸಂಖ್ಯೆ ಕೂಡ 130ಕ್ಕೆ ಏರಿಕೆಯಾಗಿದೆ.

ಆಸ್ಪತ್ರೆಗೇ ಬೀಗ ಜಡಿದ ಬಿಎಂಸಿ ಅಧಿಕಾರಿಗಳು
ಇನ್ನು ಮುಂಬೈನ ಚೆಂಬೂರ್ ನಲ್ಲಿರುವ ಸಾಯಿ ಆಸ್ಪತ್ರೆಗೆ ಶಂಕಿತ ಸೋಂಕಿತ ವ್ಯಕ್ತಿ ದಾಖಲಾಗಿದ್ದ ವಿಚಾರ ತಿಳಿಯುತ್ತಿದ್ದಂತೆಯೇ ಬಿಎಂಸಿ ಅಧಿಕಾರಿಗಳು ಖಾಸಗಿ ಸಾಯಿ ಆಸ್ಪತ್ರೆಗೆ ಬೀಗ ಜಡಿದಿದ್ದಾರೆ. ಕೊರೋನಾ ಸೋಂಕು ಶಂಕಿತ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಸರ್ಕಾರಕ್ಕೆ  ಮಾಹಿತಿ ನೀಡದ ಆರೋಪದ ಮೇರೆಗೆ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಬಿಎಂಸಿ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ಬೀಗ ಜಡಿದಿದ್ದು, ಆಸ್ಪತ್ರೆಯಲ್ಲಿದ್ದ ಸಿಬ್ಬಂದಿ ಮತ್ತು ರೋಗಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಮತ್ತೋರ್ವ ರೋಗಿಯನ್ನು ಕಸ್ತೂರ  ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

2000 ಗಡಿಯತ್ತ ಸೋಂಕಿತರ ಸಂಖ್ಯೆ
ಇನ್ನು ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಸೋಂಕಿತರ ಪ್ರಮಾಣದಲ್ಲಿ ಗಣನೀಯ ಹೆಚ್ಚಳವಾಗುವ ಭೀತಿ ಎದುರಾಗಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಕೊರೋನಾ ವೈರಸ್ ಲಕ್ಷಣಗಳು ಕಂಡುಬಂದ  ಹಿನ್ನಲೆಯಲ್ಲಿ ಬರೊಬ್ಬರಿ 200ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ವೈದ್ಯಕೀಯ ವರದಿ ಬಳಿಕ ಇವರಿಗೆ ಸೋಂಕು ಇರುವಕುರಿತು ಮಾಹಿತಿ ಲಭ್ಯವಾಗಲಿದೆ. ಅಂತೆಯೇ ಅಸ್ಸಾಂ ನಲ್ಲಿ ಮತ್ತೆ 8 ಮಂದಿಗೆ ಸೋಂಕು ತಗುಲಿದ ಕುರಿತು ಮಾಹಿತಿ ಲಭ್ಯವಾಗಿದೆ, ಆಂಧ್ರ  ಪ್ರದೇಶದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಪ್ರಸ್ತುತ ಭಾರತದಲ್ಲಿ 437 ಹೊಸ ಪ್ರಕರಣಗಳು ದಾಖಲಾಗಿದ್ದು ಆ ಮೂಲಕ ಸೋಂಕಿತರ ಸಂಖ್ಯೆ 1834ಕ್ಕೆ ಏರಿಕೆಯಾಗಿದ್ದು, ಈ ಪೈಕಿ 144 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT