ಸಾಂದರ್ಭಿಕ ಚಿತ್ರ 
ದೇಶ

ಲಾಕ್ ಡೌನ್ ಪರಿಣಾಮ: ಮನೆಗೆ ತೆರಳಲು ಸತ್ತಂತೆ ನಾಟಕ!

ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬ ಮನೆಗೆ ತೆರಳಲು ಸತ್ತಂತೆ ನಾಟಕ ಮಾಡಿ, ಸುಳ್ಳು ದಾಖಲೆ ಮಾಡಿಸಿ ಪೊಲೀಸರಿಗೆ ಪಡಬಾರದ ಫಜೀತಿ ತಂದಿಟ್ಟಿದ್ದಾನೆ.

ಶ್ರೀನಗರ: ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬ ಮನೆಗೆ ತೆರಳಲು ಸತ್ತಂತೆ ನಾಟಕ ಮಾಡಿ, ಸುಳ್ಳು ದಾಖಲೆ ಮಾಡಿಸಿ ಪೊಲೀಸರಿಗೆ ಪಡಬಾರದ ಫಜೀತಿ ತಂದಿಟ್ಟಿದ್ದಾನೆ.

ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬ ಮನೆ ಸೇರಲು ಸತ್ತಂತೆ ನಟಿಸಿ ಆ್ಯಂಬುಲೆನ್ಸ್ ಮೂಲಕ ಮನೆಗೆ ತಲುಪಿದ ವಿಚಿತ್ರ ಘಟನೆ ಪೂಂಚ್ ಜಿಲ್ಲೆಯಲ್ಲಿ ವರದಿಯಾಗಿದೆ.

ಹಕ್ರಮ್ ಎಂಬಾತ ಕಳೆದ ವಾರ ಗಾಯಗೊಂಡು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ. ಮಂಗಳವಾರ ಬಿಡುಗಡೆಯಾಗಿದ್ದ, ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಮನೆಗೆ ತೆರಳಲು ಸಾಧ್ಯವಾಗಿರಲಿಲ್ಲ.ಇದಕ್ಕಾಗಿ ತನ್ನ ಅಪ್ತರ ನೆರವಿನಿಂದ ಮನೆಗೆ ತೆರಳಲು ಸುಳ್ಳು ಮರಣ ಪತ್ರ ಮಾಡಿಸಿ ಖಾಸಗಿ ಆ್ಯಂಬುಲೆನ್ಸ್ ಮೂಲಕ ಮನೆಗೆ ತಲುಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಷಯ ಗೊತ್ತಾಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಪೊಲೀಸರು ಆಯಂಬುಲೆನ್ಸ್ ಚಾಲಕನನ್ನು ವಿಚಾರಣೆಗೊಳಪಡಿಸಿ ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಅವರನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT