ದೇಶ

ಸಫ್ದರ್ ಜಂಗ್ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೋವಿಡ್-19 ಸೋಂಕು ದೃಢ

Srinivas Rao BV

ಸಫ್ದರ್ ಜಂಗ್: ಸಫ್ದರ್ ಜಂಗ್ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೋನಾ ವೈರಸ್ ಸೋಂಕು ಹರಡಿದೆ. 

ಕೋವಿಡ್-19 ಯುನಿಟ್ ನಲ್ಲಿದ್ದ ಓರ್ವ ವೈದ್ಯ ಹಾಗೂ ಬೈಯೋಕೆಮಿಸ್ಟ್ರಿ ವಿಭಾಗದಲ್ಲಿ 3 ನೇ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ತಗುಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅಧಿಕಾರಿಗಳ ಮಾಹಿತಿಯ ಪ್ರಕಾರ ವಿದ್ಯಾರ್ಥಿನಿಗೆ ವಿದೇಶ ಪ್ರಯಾಣದ ಹಿನ್ನೆಲೆ ಇದೆ. ಇಬ್ಬರನ್ನೂ ಐಸೊಲೇಷನ್ ಗೆ ವಾರ್ಡ್ ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಇಬ್ಬರೂ ವೈದ್ಯರು ಸಂಪರ್ಕಿಸಿರುವ ವ್ಯಕ್ತಿಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕೋವಿಡ್-19 ಪಾಸಿಟಿವ್ ಪ್ರಕರಣಗಳು 1,637 ಕ್ಕೆ ಏರಿಕೆಯಾಗಿದೆ.

SCROLL FOR NEXT