ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣದಲ್ಲಿ ಮತ್ತೆ ಮೂವರ ಸಾವು, 30 ಹೊಸ ಪ್ರಕರಣ: ಆತಂಕದಲ್ಲಿ ಜನ

ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ  ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. 

ಹೈದರಾಬಾದ್ : ತೆಲಂಗಾಣದಲ್ಲಿ ಕೊರೊನಾ ಸೋಂಕಿನಿಂದಾಗಿ  ಬುಧವಾರ ಮೂವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ನಡೆದಿದ್ದ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು. 

ಕೋವಿಡ್‌–19 ದೃಢಪಟ್ಟ ಮೂವತ್ತು ಹೊಸ ಪ್ರಕರಣಗಳು ತೆಲಂಗಾಣದಲ್ಲಿ ವರದಿಯಾಗಿರುವುದಾಗಿ ಗುರುವಾರ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಕಚೇರಿಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಸೋಂಕಿನಿಂದಾಗಿ ಈ ಹಿಂದೆ ರಾಜ್ಯದಲ್ಲಿ ಮೃತಪಟ್ಟಿರುವ ಆರು ಮಂದಿ ಸಹ ತಬ್ಲೀಗ್‌ ಜಮಾತ್‌ನ ಧಾರ್ಮಿಕ ಸಭೆಯಲ್ಲಿ ಭಾಗಿವಹಿಸಿದ್ದರು. ಬುಧವಾರ ಮೂವರು ಸಾವಿಗೀಡಾಗುವ ಮೂಲಕ ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟಿರುವ ಎಲ್ಲ 30 ಮಂದಿಯೂ ದೆಹಲಿಯ ನಿಜಾಮುದ್ದೀನ್‌ಗೆ ಭೇಟಿ ನೀಡಿದ ಹಿನ್ನೆಲೆ ಹೊಂದಿದ್ದಾರೆ. 

ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿ ಪ್ರದೇಶಗಳು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ತಿಂಗಳು ನಿಜಾಮುದ್ದೀನ್‌ನಲ್ಲಿ ನಡೆದ ಸಭೆಯಲ್ಲಿ ಸುಮಾರು 8,500 ಮಂದಿ ಭಾಗಿಯಾಗಿದ್ದು, ಅವರೆಲ್ಲರ ಗುರುತು ಪತ್ತೆ ಮಾಡಬೇಕಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT