ಸಂಗ್ರಹ ಚಿತ್ರ 
ದೇಶ

ಮಹಾಮಾರಿ ಕೊರೋನಾಗೆ ಇಬ್ಬರು ಬಲಿ: ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇದರಂತೆ ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇದರಂತೆ ದೇಶದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಇದೇ ಮೊದಲ ಬಾರಿಗೆ ಹರಿಯಾಣ ರಾಜ್ಯದಲ್ಲಿ ವೈರಸ್'ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆಂದು ಮೂಲಗಳು ತಿಳಿಸಿವೆ. 

ಚಂಡೀಗಢದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 67 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆಂದು ಅಂಬಾಲಾದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ.ಕುಲದೀಪ್ ಸಿಂಗ್ ಅವರು ಹೇಳಿದ್ದಾರೆ. 

ಇನ್ನು ರಾಜಸ್ತಾನದಲ್ಲಿಯೂ 52 ವರ್ಷದ ವ್ಯಕ್ತಿಯೊಬ್ಬರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಮೃತ ವ್ಯಕ್ತಿ ಶ್ರೀಲಂಕಾದಿಂದ ಭಾರತಕ್ಕೆ ಬಂದಿದ್ದರು. ಮಾರ್ಚ್ 19 ರಂದು ಆಸ್ಪತ್ರೆಗೆ ದಾಖಲಾಗಿದ್ದ ಇವರಲ್ಲಿ ವೈರಸ್ ದೃಢಪಟ್ಟಿದ್ದು. ಇದೀಗ ಅವರ ಕುಟುಂಬ ಸದಸ್ಯರನ್ನೂ ಪರೀಕ್ಷೆಗೊಳಪಡಿಸಲಾಗಿದ್ದು, ಎಲ್ಲರಲ್ಲೂ ವೈರಸ್ ಇರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಸಂಪುಟ ವಿಸ್ತರಣೆ ಮುನಿಸು ಕೊನೆಗೂ ಶಮನ: ರಾಜೀನಾಮೆ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!