ವೈದ್ಯರ ಮೇಲೆ ಕಲ್ಲು ತೂರಾಟ 
ದೇಶ

ಸೋಂಕು ಪರೀಕ್ಷೆಗೆ ಬಂದ ವೈದ್ಯರ ಮೇಲೆ ಕಲ್ಲು ತೂರಾಟ; ಇಬ್ಬರಿಗೆ ಗಾಯ

ಕೊರೊನಾ ವೈರಸ್‌ ಸೋಂಕು ಆತಂಕ ವ್ಯಾಪಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿ ಇಲ್ಲಿನ ಸ್ಥಳೀಯರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದು, ಅವರ ಮೇಲೆ ಕಲ್ಲು ತೂರಾಟ ನಡೆಸಿ ಓಡಿಸಲಾಗಿದೆ. 

ಇಂದೋರ್‌: ಕೊರೊನಾ ವೈರಸ್‌ ಸೋಂಕು ಆತಂಕ ವ್ಯಾಪಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತಿಕೊರೊನಾ ವೈರಸ್‌ ಸೋಂಕು ಆತಂಕ ವ್ಯಾಪಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿ ಇಲ್ಲಿನ ಸ್ಥಳೀಯರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದು, ಅವರ ಮೇಲೆ ಕಲ್ಲು ತೂರಾಟ ನಡೆಸಿ ಓಡಿಸಲಾಗಿದೆ. 

ಇಂದೋರ್‌ನ ಟಾಟಪಟ್ಟಿ ಬಖಾಲ್‌ನಲ್ಲಿ ಬುಧವಾರ ಈ ಘಟನೆ ನಡೆದಿದೆ. ಮೂವರು ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಐವರ ತಂಡ ನಿರ್ದಿಷ್ಟ ವ್ಯಕ್ತಿಯ ಪರೀಕ್ಷೆಗಾಗಿ ಸ್ಥಳಕ್ಕೆ ತೆರಳಿತ್ತು. ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ವರದಿಯಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲು ವೈದ್ಯರು ವ್ಯಕ್ತಿಯ ಹುಡುಕಾಟದಲ್ಲಿದ್ದರು. ಆದರೆ, ಆ ವ್ಯಕ್ತಿಯ ಕುರಿತು ವಿಚಾರಿಸುತ್ತಿದ್ದಂತೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳಾ ವೈದ್ಯರು ಗಾಯಗೊಂಡಿದ್ದಾರೆ. 

'ಸೋಂಕು ಶಂಕಿತ ವ್ಯಕ್ತಿಯ ಕುರಿತು ವಿಚಾರಿಸುತ್ತಿದ್ದಂತೆ ಜನರು ಭಾರೀ ವಿರೋಧ ವ್ಯಕ್ತ ಪಡಿಸಲು ಶುರು ಮಾಡಿದರು, ಅವರೊಂದಿಗೆ ಇನ್ನಷ್ಟು ಜನ ಸೇರಿಕೊಂಡು ಕಲ್ಲು ತೂರಾಟ ಆರಂಭಿಸಿದರು. ಸಮೀಪದಲ್ಲೇ ಇದ್ದ ಪೊಲೀಸ್‌ ಸಿಬ್ಬಂದಿ ನಮ್ಮ ರಕ್ಷಣೆ ಬಂದರು' ಎಂದು ಗಾಯಗೊಂಡಿರುವ ವೈದ್ಯೆಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!