ದೇಶ

ಕೊವಿಡ್-19: ಆಂಧ್ರದಲ್ಲಿ 140 ಹೊಸ ಪ್ರಕರಣ ಪತ್ತೆ, ಈ ಪೈಕಿ 108 ಮಂದಿ ಜಮಾತ್ ಸಭೆಯಲ್ಲಿ ಭಾಗಿ

Lingaraj Badiger

ಅಮರಾವತಿ: ದೆಹಲಿಯ ನಿಜಾಮುದ್ದೀನ್ ನಂಜು ದೇಶಾದ್ಯಂತ ವಿಶೇಷವಾಗಿ ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಆಂಧ್ರ ಪ್ರದೇಶದಲ್ಲಿ ಮತ್ತೆ 140 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಪೈಕಿ 108 ಮಂದಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು.

ಕಳೆದ 24 ಗಂಟೆಗಳಲ್ಲಿ ಆಂಧ್ರದಲ್ಲಿ ಒಟ್ಟು 161 ಮಂದಿಗೆ ಕೊವಿಡ್-19 ಪಾಸಿಟಿವ್ ಬಂದಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೊಹನ್ ರೆಡ್ಡಿ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 184 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಜಮಾತ್ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು 2,000ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಮಾ. 13ರಿಂದ 15ರವರೆಗೆ ಈ ಸಭೆ ನಡೆದಿತ್ತು. ಇದೀಗ ಸಭೆಯಲ್ಲಿ ಭಾಗವಹಿಸಿದ್ದ ಆಂಧ್ರ ಪ್ರದೇಶದ 108 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

SCROLL FOR NEXT