ದೇಶ

ಕೇರಳ-ಕರ್ನಾಟಕ ಗಡಿ ವಿವಾದ: ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜತೆ ಚರ್ಚಿಸಿ ನಿರ್ಧರಿಸಿ ಎಂದ ಸುಪ್ರೀಂ, ವಿಚಾರಣೆ ಏ.7ಕ್ಕೆ ಮುಂದೂಡಿಕೆ

Raghavendra Adiga

ನವದೆಹಲಿ: ಕೋವಿಡ್ ಮಹಾಮಾರಿ ಹರಡುವಿಕೆ ತಡೆಗಾಗಿ ದೇಶವು ಸಂಪೂರ್ಣ ಲಾಕ್ ಡೌನ್ ಆಗಿರುವ ವೇಳೆ ಕರ್ನಾಟಕ ಹಾಗೂ ಕೇರಳದ ಗಡಿ ಬಂದ್ ಮಾಡಿದೆ. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಈ ಸಂಬಂಧ ತೀರ್ಮಾನ ತೆಗೆದುಕೊಳ್ಲಬೇಕೆಂದು ಹೇಳಿದೆ. 

ಕೇರಳ ಹೈಕೋರ್ಟ್ ಕರ್ನಾಟಕವು ಕೇರಳ -ಕರ್ನಾಟಕ ಗಡಿಯನ್ನು ತುರ್ತು ಅಗತ್ಯಗಳಿಗೆ ಮುಕ್ತಗೊಳಿಸಬೇಕು ಎಂದು ಆದೇಶಿಸಿದ ಹಿನ್ನೆಲೆ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 

ಕೇರಳ-ಕರ್ನಾಟಕ ಗಡಿ ವಿವಾದ ಕುರಿತು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಉಭಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಲ್ಲಿ ಕೇರಳದಿಂದ ಕರ್ನಾಟಕಕ್ಕೆ ವೈದ್ಯಕೀಯ ಚಿಕಿತ್ಸೆಗಾಗಿ ಜನ ಸಂಚಾರಕ್ಕಾಗಿ  ಹೇಗೆ ಅನುಕೂಲ ಕಲ್ಪಿಸಬೇಕು  ಎಂದು ತೀರ್ಮಾನಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಈ ಕುರಿತು ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕೆ ನಿಗದಿಪಡಿಸಲಾಗಿದೆ.

SCROLL FOR NEXT