ದೇಶ

ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಎನ್'ಕೌಂಟರ್: 2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಮುಂದುವರೆದ ಕಾರ್ಯಾಚರಣೆ

Manjula VN

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ 

ಕುಲ್ಗಾಂ ಜಿಲ್ಲೆಯ ಮಂಜ್ಗಾಮ್ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಸೇನಾಪಡೆಗಳು, ಕೂಡಲೇ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಬಳಿಕ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆಗಳು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

SCROLL FOR NEXT