ಯೋಗಿ ಆದಿತ್ಯನಾಥ್ 
ದೇಶ

ತಬ್ಲಿಘಿ ಜಮಾತ್ ನಲ್ಲಿ ಭಾಗಿಯಾದವರನ್ನು ಹಿಡಿದು, ಮೊಬೈಲ್ ಕರೆ ವಿವರ ಪರಿಶೀಲಿಸಿ: ಯೋಗಿ ಆದಿತ್ಯನಾಥ್

ಕೊರೋನಾ ವೈರಸ್ ಭೀತಿಯ ನಡುವೆಯೇ ತಬ್ಲಿಘಿ ಜಮಾತ್ ನಲ್ಲಿ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಶದ ವಿವಿಧ ಭಾಗಗಳಿಗೆ ಸಂಚರಿಸಿ ಸೋಂಕು ಹರಡುತ್ತಿರುವವರ ಬಗ್ಗೆ ದೇಶಾದ್ಯಂತ ಆತಂಕ ಎದುರಾಗಿದೆ. 

ಲಖನೌ: ಕೊರೋನಾ ವೈರಸ್ ಭೀತಿಯ ನಡುವೆಯೇ ತಬ್ಲಿಘಿ ಜಮಾತ್ ನಲ್ಲಿ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಶದ ವಿವಿಧ ಭಾಗಗಳಿಗೆ ಸಂಚರಿಸಿ ಸೋಂಕು ಹರಡುತ್ತಿರುವವರ ಬಗ್ಗೆ ದೇಶಾದ್ಯಂತ ಆತಂಕ ಎದುರಾಗಿದೆ. 

ವೈದ್ಯರಿಕೆ ಅಸಹಕಾರ ನೀಡುತ್ತಿರುವುದು ಸೇರಿದಂತೆ ಹಲವು ಅಹಿತಕರ ಬೆಳವಣಿಗೆ ಮಧ್ಯೆ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಎಲ್ಲರ ಗಮನ ಸೆಳೆಯುವಂತಹ ಆದೇಶ ನೀಡಿದ್ದಾರೆ. 

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಹಿಡಿದು, ಮೊಬೈಲ್ ಫೋನ್ ಗಳನ್ನು ವಶಕ್ಕೆ ತೆಗೆದುಕೊಂಡು, ಕರೆ ವಿವರಗಳನ್ನು ಪರಿಶೀಲಿಸಬೇಕೆಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

ಕಳೆದ ತಿಂಗಳು ಲಾಕ್ ಡೌನ್ ಹೊರತಾಗಿಯೂ ಮಸೀದಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ದೇಶಾದ್ಯಂತ ಸಂಚರಿಸಿದ್ದು, ಕೊರೋನಾ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡುವುದಕ್ಕೆ ಮೂಲವಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಲಾಕ್ ಡೌನ್ ಹೊರತಾಗಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಉದ್ದೇಶ ಪೂರ್ವಕವಾಗಿ ಉಲ್ಲಂಘನೆ ಮಾಡಿರುವುದು, ಸಮಾಜದಲ್ಲಿ ಆತಂಕ ಮೂಡಿಸಿರುವುದು ಯೋಜಿತ ಷಡ್ಯಂತ್ರದ ಭಾಗವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. 

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾದವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ಪಡೆಯಿರಿ, ಮೊಬೈಲ್ ಗಳನ್ನು ವಶಕ್ಕೆ ಪಡೆದು ಕರೆ ವಿವರಗಳನ್ನು ಪರಿಶೀಲಿಸಿ, ಅವರಿಗೆ ಸಂಬಂಧಪಟ್ಟಿದ್ದನ್ನು ತಪಾಸಣೆ ಮಾಡಿ, ಒಂದು ವೇಳೆ ಏನಾದರೂ ಅನುಮಾನಾಸ್ಪದವಾಗಿ ಕಂಡುಬಂದರೆ ಅದನ್ನು ವಶಕ್ಕೆ ಪಡೆಯಿರಿ, ಸ್ಯಾನಿಟೈಸೇಷನ್, ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸಿ ಎಂದು ಯೋಗಿ ಆದಿತ್ಯನಾಥ್ ತಮ್ಮ ಸರ್ಕಾರ ರಚನೆ ಮಾಡಿರುವ ಟೀಂ-11 ಕ್ಕೆ ತಿಳಿಸಿದ್ದಾರೆ. 

ಕೋವಿಡ್-19 ಸೋಂಕು ಭಾರತದಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅದನ್ನು ಸಮರ್ಥವಾಗಿ ಎದುರಿಸುವುದಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ 11 ಮಂದಿ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಿದ್ದಾರೆ. ಈ ತಂಡಕ್ಕೆ 
ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾದವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು ಎಂದು ಸೂಚಿಸಲಾಗಿದ್ದು, ಲಾಕ್ ಡೌನ್ ಮುಕ್ತಾಯಗೊಂಡ ನಂತರದ ಪರಿಸ್ಥಿತಿ ಸುಗಮವಾಗಿರುವಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಯೂ ಕಾರ್ಯಸೂಚಿ ತಯಾರಿಸಲು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Israel -Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ

'Greater Bengaluru Authority' ವ್ಯಾಪ್ತಿಯಲ್ಲಿ ಇಂದಿನಿಂದ ಜಾತಿಗಣತಿ: 17 ಸಾವಿರ ಸಿಬ್ಬಂದಿಗಳ ನಿಯೋಜನೆ, ಅನಾವಶ್ಯಕ ಗೈರಾದವರಿಗೆ ಕಠಿಣ ಕ್ರಮದ ಎಚ್ಚರಿಕೆ..!

ದಸರಾ ಪರೇಡ್​ನಲ್ಲಿ ಸಿಎಂ ಜತೆ ಸಚಿವ ಮಹದೇವಪ್ಪ ಮೊಮ್ಮಗನ ದರ್ಬಾರ್: ವಿವರಣೆ ಕೋರಿದ ಕಾಂಗ್ರೆಸ್ ಹೈ ಕಮಾಂಡ್!

ಬಿಹಾರ ಚುನಾವಣೆಗೋಸ್ಕರ GST ಸರಳೀಕರಣ: ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ 15,000 ಕೋಟಿ ರೂ. ನಷ್ಟ; ಸಿಎಂ ಸಿದ್ದರಾಮಯ್ಯ

ಬರವಣಿಗೆ ಮೂಲಕ ಸಂಪಾದಕೀಯದ ಘನತೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ದವರು ಜಾರ್ಜ್: ಡಿ.ಕೆ. ಶಿವಕುಮಾರ್

SCROLL FOR NEXT