ದೇಶ

ಮತ್ತೆ ಕೊರೋನಾ ವೈರಸ್ ಆರ್ಭಟ: ಕೇವಲ 12 ಗಂಟೆಗಳಲ್ಲಿ 302 ಹೊಸ ಸೋಂಕಿತರು, ಭಾರತದಲ್ಲಿ ಸೋಂಕಿತರ ಸಂಖ್ಯೆ 3374ಕ್ಕೆ ಏರಿಕೆ, 77 ಸಾವು

Srinivasamurthy VN

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕೇವಲ 12 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ ಬರೊಬ್ಬರಿ 302 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 3374ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, 12 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 302 302 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಭಾರತದಲ್ಲಿ ಸೋಂಕಿತರ ಸಂಖ್ಯೆ 3374ಕ್ಕೆ ಏರಿಕೆಯಾಗಿದೆ. ಈ ಪೈಕಿ 3030 ಕೊರೋನಾ ಪ್ರಕರಣಗಳು ಚಿಕಿತ್ಸಾ  ಹಂತದಲ್ಲಿದ್ದು, 267 ಮಂದಿ ಗುಣಮುಖರಾಗಿದ್ದಾರೆ. ಅಂತೆಯೇ 77 ಮಂದಿ ಸಾವನ್ನಪ್ಪಿದ್ದಾರೆ. 

ಮಹಾರಾಷ್ಟ್ರದಲ್ಲಿ ಸೋಂಕಿತರಂ ಸಂಖ್ಯೆ 490ಕ್ಕೆ ಏರಿಕೆಯಾಗಿದ್ದು, ತಮಿಳುನಾಡಿನಲ್ಲಿ 485ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 445ಕ್ಕೆ ಸೋಂಕಿತರ ಸಂಖಥ್ಯೆ ಹೆಚ್ಚಿದ್ದು, ಕೇರಳದಲ್ಲಿ 306, ತೆಲಂಗಾಣದಲ್ಲಿ 269, ಉತ್ತರ ಪ್ರದೇಶದಲ್ಲಿ 227ಕ್ಕೆ ಏರಿಕೆಯಾಗಿದ್ದು, ಕರ್ನಾಟಕದಲ್ಲಿ ಸೋಂಕಿತರ  ಸಂಖ್ಯೆ 144ಕ್ಕೆ ಏರಿಕೆಯಾಗಿದೆ.

SCROLL FOR NEXT