ಲೋಕಪಾಲ್ ಸದಸ್ಯ ಅಜಯ್ ಕುಮಾರ್ ತ್ರಿಪಾಠಿಗೂ ಕೊರೋನಾ ಸೋಂಕು: ಸ್ಥಿತಿ ಗಂಭೀರ, ಆದರೆ ಸ್ಥಿರ!
ಲೋಕಪಾಲ್ ಸದಸ್ಯ ಅಜಯ್ ಕುಮಾರ್ ತ್ರಿಪಾಠಿಗೆ ಕೊರೋನಾ ಸೋಂಕು ತಗುಲಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ: ಲೋಕಪಾಲ್ ಸದಸ್ಯ ಅಜಯ್ ಕುಮಾರ್ ತ್ರಿಪಾಠಿಗೆ ಕೊರೋನಾ ಸೋಂಕು ತಗುಲಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
62 ವರ್ಷದ ತ್ರಿಪಾಠಿ, ಛತ್ತೀಸ್ ಗಢದ ಮಾಜಿ ಮುಖ್ಯನ್ಯಾಯಮೂರ್ತಿಯಾಗಿದ್ದು, ಏಮ್ಸ್ ನ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಅಳವಡಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಲೋಕಪಾಲ್ ನ ನಾಲ್ವರು ಸದಸ್ಯರನ್ನೊಳಗೊಂಡ ಸಮಿತಿಯಲ್ಲಿ ತ್ರಿಪಾಠಿ ಅವರಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.