ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ಪರಿಸ್ಥಿತಿ ಕುರಿತಂತೆ ಸೋನಿಯಾ, ಸಿಂಗ್  ಮತ್ತಿತರೊಂದಿಗೆ ಮೋದಿ ಮಾತುಕತೆ

ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿ ಕುರಿತಂತೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮನ್ ಮೋಹನ್ ಸಿಂಗ್ ಸೇರಿದಂತೆ ಹಲವು ರಾಜಕೀಯ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ
Nagaraja AB
Updated On : 5 Apr 2020, 6:41 pm

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿ ಕುರಿತಂತೆ 
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮನ್ ಮೋಹನ್ ಸಿಂಗ್ ಸೇರಿದಂತೆ ಹಲವು ರಾಜಕೀಯ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಿದ್ದಾರೆ.

ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ, ಡಿಎಂಕೆ ನಾಯಕ ಎಂ. ಕೆ. ಸ್ಟಾಲಿನ್.  ಮತ್ತಿತರರೊಂದಿಗೂ ಪ್ರಧಾನಿ ಮಾತುಕತೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಮಾರಕ ಸಾಂಕ್ರಾಮಿಕ ರೋಗದ ವಿಚಾರವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ರಾಷ್ಟ್ರಪತಿ ಪ್ರತಿಬಾ ಪಾಟೀಲ್ ಅವರೊಂದಿಗೂ ಮೋದಿ ಚರ್ಚಿಸಿದ್ದಾರೆ.

Advertisement

Advertisement

ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಸಭೆ ಹಾಗೂ ರಾಜ್ಯಸಭೆಯ ವಿವಿಧ ಪಕ್ಷಗಳ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement