ದೇಶ

ಮಹಾರಾಷ್ಟ್ರ: ಕೊರೋನಾ ಬಗ್ಗೆ ನಕಲಿ ಸುದ್ದಿ, 11 ಜನರು ಬಂಧನ, 85 ಎಫ್ ಐಆರ್

Nagaraja AB

ಮುಂಬೈ: ಸಾಮಾಜಿಕ ಜಾಲತಾಣಗಳಲ್ಲಿ ಕೊರೋನಾ ವೈರಸ್ ಹರಡುವಿಕೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಹಾಗೂ ವದಂತಿಗಳನ್ನು ಹರಡುತ್ತಿದ್ದ ಆರೋಪದ ಮೇರೆಗೆ ಮಹಾರಾಷ್ಟ್ರ ಸೈಬರ್ ಪೊಲೀಸರು 11 ಮಂದಿಯನ್ನು ಬಂಧಿಸಿದ್ದು, ಇತರ 85 ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಜನರಲ್ಲಿ ಭೀತಿಯನ್ನು ಸೃಷ್ಟಿಸುವಂತಹ ಅನೇಕ ಸುಳ್ಳು ಸಂದೇಶಗಳನ್ನು  ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಲಾಕ್ ಡೌನ್ ಜಾರಿಯಾದ ಸಂದರ್ಭದಿಂದಲೂ ಈ ರೀತಿಯ ಸುಳ್ಳು ಸಂದೇಶಗಳನ್ನು ಹಾಕುತ್ತಿದ್ದವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ  ಫೇಸ್ ಬುಕ್ ಹಾಗೂ ವಾಟ್ಸ್ ಆಪ್ ದುರ್ಬಳಕೆಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ 12 ಗಂಟೆಗಳ ಅವಧಿಯಲ್ಲಿ 490 ಪ್ರಕರಣಗಳು ಏರಿಕೆಯೊಂದಿಗೆ ದೇಶದಲ್ಲಿ ಒಟ್ಟಾರೇ  ಕೋವಿಡ್- 19 ಸೋಂಕಿತರ ಸಂಖ್ಯೆ 4, 067ಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ತಿಳಿಸಿದೆ. 

SCROLL FOR NEXT