ದೇಶ

ಕೋವಿಡ್-19: ಭಾರತಕ್ಕೆ 2.9 ಮಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡಿದ ಅಮೆರಿಕಾ

Nagaraja AB

ನವದೆಹಲಿ:ಕೊರೋನಾವೈರಸ್ ನಿಗ್ರಹಕ್ಕೆ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿರುವಂತೆ ನರೇಂದ್ರ ಮೋದಿ ಸರ್ಕಾರಕ್ಕೆ ಸಹಾಯ ಮಾಡುವ ನಿಟ್ಟಿನಲ್ಲಿ ಭಾರತಕ್ಕೆ 2.9 ಮಿಲಿಯನ್ ಮೊತ್ತದ ನೆರವಿನ ಪ್ಯಾಕೇಜ್ ನ್ನು ಅಮೆರಿಕಾ ಕೊಡುಗೆಯಾಗಿ ನೀಡಿದೆ.

ಕೋವಿಡ್ -19 ವಿರುದ್ಧದ  ಹೋರಾಟಕ್ಕಾಗಿ ಭಾರತಕ್ಕೆ ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಇರುವ ಅಮೆರಿಕಾ ಏಜೆನ್ಸಿ ಮೂಲಕ 2. 9 ಬಿಲಿಯನ್ ಡಾಲರ್ ಮೊತ್ತದ ನೆರವನ್ನು ನೀಡುವುದಾಗಿ  ಅಮೆರಿಕಾ ಸರ್ಕಾರ  ಮಾರ್ಚ್ 28 ರಂದು ಘೋಷಿಸಿತ್ತು.

ಕಳೆದ 20 ವರ್ಷಗಳಲ್ಲಿ ಅಮೆರಿಕಾ ಭಾರತಕ್ಕೆ ಒದಗಿಸಿದ 1. 4 ಬಿಲಿಯನ್ ಡಾಲರ್  ಮೊತ್ತದ ಆರೋಗ್ಯ ನೆರವು ಮತ್ತು ಒಟ್ಟಾರೇ ಸುಮಾರು  3 ಬಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್  ಉಭಯ ರಾಷ್ಟ್ರಗಳ ನಡುವೆ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ ಎಂದು ಭಾರತದಲ್ಲಿನ ಅಮೆರಿಕಾದ ರಾಯಬಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ನಿಧಿಯಿಂದ ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು ಭಾರತಕ್ಕೆ ನೆರವಾಗಲಿದೆ. ಸೋಂಕು ಪೀಡಿತರಿಗೆ ಚಿಕಿತ್ಸೆ ಒದಗಿಸಲು ಮತ್ತು ರೋಗ ನಿಯಂತ್ರಣ ನಿಟ್ಟಿನಲ್ಲಿ ಅಗತ್ಯ ಸಾಧನ ಸಲಕರಣೆಗಳ ಪೂರೈಕೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೇ ಸಾಂಕ್ರಾಮಿಕ ರೋಗದ ತಡೆಗಾಗಿ ಏಶಿಯನ್ ಸದಸ್ಯ ರಾಷ್ಟ್ರಗಳಿಗೆ ಅಮೆರಿಕಾದ ಅಂದಾಜು 18. 3 ಮಿಲಿಯನ್ ಡಾಲರ್ ಮೊತ್ತದ ನೆರವಿನ ಪ್ಯಾಕೇಜ್ ನೀಡಿರುವುದು ತಿಳಿದುಬಂದಿದೆ.

SCROLL FOR NEXT