ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಕೆಮ್ಮು, ಶೀತ ಕಾಣಿಸಿಕೊಂಡ ಯುವಕ ಆತ್ಮಹತ್ಯೆ! ಕೊರೋನಾ ಶಂಕೆ

ಕೆಮ್ಮು, ಶೀತದಿಂದ ಬಳಲುತ್ತಿದ್ದ 35 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ

ಬಾಂದಾ: ಕೆಮ್ಮು, ಶೀತದಿಂದ ಬಳಲುತ್ತಿದ್ದ 35 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ

ಜಿಲ್ಲೆಯ ಜಮಲ್ ಪುರ ಗ್ರಾಮದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊರೋನಾವೈರಸ್ ಭೀತಿಯಿಂದ ಆತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಮೃತನನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ. ಈತನಿಗೆ ಕೆಮ್ಮು, ಶೀತ ಕಾಣಿಸಿಕೊಂಡ ಬಳಿಕ ಕೆಲ ಗ್ರಾಮಸ್ಥರು ಕೊರೋನಾ ಸೋಂಕು ತಗುಲಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ನಂತರ ಆತ ಸ್ವಯಂ ಪ್ರೇರಣೆಯಿಂದ ಕೊಠಡಿಯೊಂದರಲ್ಲಿ ಪ್ರತ್ಯೇಕವಾಗಿದ್ದ. ಇದೇ ಕಾರಣದಿಂದ ಆತ ಮೃತಪಟ್ಟಿರಬಹುದೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿಕಿತ್ಸೆಗಾಗಿ ಆ ಯುವಕ ಯಾವುದೇ ಸರ್ಕಾರಿ ಆಸ್ಪತ್ರೆಗೆ ಹೋಗಿಲ್ಲ, ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕೆಲಸಗಾರ ನಾಗಿದ್ದ ರಾಜೇಂದ್ರ  ಮಾರ್ಚ್ ತಿಂಗಳ ಮಧ್ಯದಲ್ಲಿ ಸ್ವಗ್ರಾಮಕ್ಕೆ ಹಿಂತಿರುಗಿದ್ದಾನೆ. ಆಗಿನಿಂದಲೂ ಆತ ಶೀತ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ಬಗ್ಗೆ ವರದಿಯಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಸಂತೋಷ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT