ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ದೇಶ

ಮಹಾರಾಷ್ಟ್ರ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭದ್ರತಾ ಸಿಬ್ಬಂದಿ ಕ್ವಾರಂಟೈನ್ ನಲ್ಲಿ!

ಕೊರೋನಾ ವೈರಸ್ ಹೊಡೆತಕ್ಕೆ ಮಹಾರಾಷ್ಟ್ರ ರಾಜ್ಯ ಅಕ್ಷರಶ: ಭಯ ಭೀತಗೊಂಡಿದೆ. ಮುಂಬೈ ಮಹಾ ನಗರದಲ್ಲಿ ದಿನ ದಿನಕ್ಕೂ ಮಾರಣಾಂತಿಕ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. 

ಮುಂಬೈ: ಕೊರೋನಾ ವೈರಸ್ ಹೊಡೆತಕ್ಕೆ ಮಹಾರಾಷ್ಟ್ರ ರಾಜ್ಯ ಅಕ್ಷರಶ: ಭಯ ಭೀತಗೊಂಡಿದೆ. ಮುಂಬೈ ಮಹಾ ನಗರದಲ್ಲಿ ದಿನ ದಿನಕ್ಕೂ ಮಾರಣಾಂತಿಕ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. 

 ಭದ್ರತಾ ಸಿಬ್ಬಂದಿಗೆ ಚಹಾ ಪೂರೈಸಿದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಭದ್ರತೆಗೆ ನಿಯೋಜನೆಗೊಂಡಿದ್ದ ೧೭೦ ಪೊಲೀಸರು ಹಾಗೂ ಇತರ ಅಧಿಕಾರಿಗಳನ್ನು ಕ್ಯಾರೆಂಟೈನ್‌ಗೆ ಒಳಪಡಿಸಲಾಗಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋ ಶ್ರೀ ಸಮೀಪ ಚಹಾ ಪೂರೈಸುವ ವ್ಯಕ್ತಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಲಾಕ್ ಡೌನ್ ಜಾರಿಗೆ ಮೊದಲು ಎಲ್ಲಾ ಭದ್ರತಾ ಸಿಬ್ಬಂದಿ ಆತನ ಬಳಿಗೆ ತೆರಳಿ ಚಹಾ ಸೇವಿಸುತ್ತಿದ್ದರು. ಇದರಿಂದಾಗಿ ಸಿಬ್ಬಂದಿ ಒಂದು ವಾರ ಕಾಲ ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಉತ್ತರ ಭಾರತೀಯರ ಸಂಘದ ಕಟ್ಟಡದಲ್ಲಿ ಭದ್ರತಾ ಸಿಬ್ಬಂದಿಯನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. 

ಮುಖ್ಯಮಂತ್ರಿ ನಿವಾಸವಿರುವ ಪ್ರದೇಶದಲ್ಲಿ ಕೊರೋನಾ ವೈರಸ್ ಪ್ರಕರಣ ದೃಢಪಟ್ಟಿರುವ ವಿಷಯ ತಿಳಿಯುತ್ತಿದ್ದಂತೆಯೇ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ಅಧಿಕಾರಿಗಳು ಜಾಗೃತಗೊಂಡಿದ್ದಾರೆ. ಮುಖ್ಯಮಂತ್ರಿ ವಾಸವಾಗಿರುವ ಪ್ರದೇಶವನ್ನು ಕೊರೋನಾ ನಿಯಂತ್ರಣ ವಲಯ ಎಂದು ಘೋಷಿಸಿ,  ಮುಖ್ಯಮಂತ್ರಿಯ ನಿವಾಸ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷವಾಗಿ ಸೋಂಕು ನಿವಾರಕ ರಾಸಾಯನಿಕ ಸಿಂಪಡಿಸುತ್ತಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಳೆದ ಕೆಲವು ದಿನಗಳಿಂದ ಭದ್ರತಾ ಸಿಬ್ಬಂದಿಯೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಬರುತ್ತಿದ್ದಾರೆ. ಚಾಲಕನನ್ನೂ ದೂರ ಇರಿಸಿ ತಮ್ಮ ಕಾರನ್ನು ಸ್ವತಃ ಚಾಲನೆ ಮಾಡಿ ವಿವಿಧ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಅವರನ್ನು ಇತ್ತೀಚಿಗೆ ಯಾರ್ಯಾರು ಭೇಟಿ ಯಾಗಿದ್ದರು ಎಂಬ ವಿವರಗಳನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೆ ೭೪೮ ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ೪೫ ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT