ವಿಡಿಯೊ ಕಾನ್ಫರೆನ್ಸ್ ನಡೆಸಿದ ಪಿಎಂ ನರೇಂದ್ರ ಮೋದಿ 
ದೇಶ

ಏಪ್ರಿಲ್ 14ರ ನಂತರ ಲಾಕ್ ಡೌನ್ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ: ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ

ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ಕಟ್ಟಿ ಹಾಕುವುದಕ್ಕಾಗಿ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ ಎಂದು.....

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು, ಕೊವಿಡ್-19 ಕಟ್ಟಿ ಹಾಕುವುದಕ್ಕಾಗಿ ಜಾರಿಗೊಳಿಸಲಾಗಿರುವ 21 ದಿನಗಳ ಲಾಕ್ ಡೌನ್ ಅನ್ನು ಏಪ್ರಿಲ್ 14ರ ನಂತರ ಏಕಕಾಲಕ್ಕೆ ತೆರವುಗೊಳಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಹೇಳಿದ್ದಾರೆ.

ದೇಶದಲ್ಲಿ ಲಾಕ್ ಡೌನ್ ಘೋಷಿಸಿದ ನಂತರ ಇಂದು ಮೊದಲ ಬಾರಿಗೆ ಸರ್ವಪಕ್ಷಗಳ ಸಂಸದರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮೋದಿ,  ಲಾಕ್​ಡೌನ್​ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ​ಬಾರದ ಹಿನ್ನೆಲೆಯಲ್ಲಿ ಲಾಕ್​ಡೌನ್​ ಏಪ್ರಿಲ್​ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಏಪ್ರಿಲ್​ 14 ರ ನಂತರ ಲಾಕ್​ಡೌನ್​ ವಿಸ್ತರಣೆ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮೋದಿ, ಏಕಕಾಲಕ್ಕೆ ಲಾಕ್ ಡೌನ್ ಅನ್ನು ತೆರವುಗೊಳಿಸುವುದಿಲ್ಲ. ಈ ಬಗ್ಗೆ ರಾಜ್ಯಗಳ ಎಲ್ಲಾ ಸಿಎಂಗಳ ಜೊತೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ, ಕಠಿಣ ನಿರ್ಧಾರವನ್ನು ಕೈಗೊಳ್ಳಬೇಕಾಗುತ್ತದೆ ಎಂದು ಸಂಸದರಿಗೆ ತಿಳಿಸಿದ್ದಾರೆ.

ಇನ್ನೂ ಸರ್ವಪಕ್ಷ ಸಭೆಯ ಬಳಿಕ ಪಿಟಿಐಗೆ ಪ್ರತಿಕ್ರಿಯಿಸಿದ ಲೋಕಸಭೆಯ ಕಾಂಗ್ರೆಸ್​ ನಾಯಕ ಅಧೀರ್​ ರಂಜನ್​ ಚೌಧರಿ, ಲಾಕ್​ಡೌನ್​ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಏಪ್ರಿಲ್ 14ರ ನಂತರ ಲಾಕ್ ಡೌನ್ ಅನ್ನು ಒಂದೇ ಬಾರಿಗೆ​ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದಾಗಿ ಸಭೆಯ ಬಳಿಕ ಬಿಜು ಜನತಾ ದಳದ ಸಂಸದ ಪಿನಾಕಿ ಮಿಶ್ರಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT