ದೇಶ

ಮಧ್ಯ ಪ್ರದೇಶದಲ್ಲಿ ಕೊರೋನಾ ಸೋಂಕಿತ ವೈದ್ಯ ಸಾವು, ದೇಶದಲ್ಲಿ ಮಹಾಮಾರಿಗೆ ಬಲಿಯಾದ ಮೊದಲ ಡಾಕ್ಟರ್

Lingaraj Badiger

ಭೋಪಾಲ್: ದೇಶದಲ್ಲಿ ಇದೇ ಮೊದಲ ಬಾರಿಗೆ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗಿದ್ದು, ಮಧ್ಯ ಪ್ರದೇಶದ ಇಂದೋರ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊವಿಡ್-19 ಸೋಂಕಿತ 61 ವರ್ಷದ ವೈದ್ಯರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.

ಮೃತ ವೈದ್ಯರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಇಂದೋರ್ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಪ್ರವೀಣ್ ಜಡಿಯಾ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ವೈದ್ಯರ ಸಾವಿನೊಂದಿಗೆ ಇಂದೋರ್ ನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 22ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಇದುವರೆಗೆ ಒಟ್ಟು 28 ಮಂದಿ ಕೊವಿಡ್-19ಗೆ ಬಲಿಯಾಗಿದ್ದಾರೆ.

ನಿನ್ನೆಯಷ್ಟೇ ಮಧ್ಯ ಪ್ರದೇಶದಲ್ಲಿ ಕೊರೋನಾ ವೈರಸ್ ಸೋಂಕಿತ 6 ಮಂದಿ ಮೃತಪಟ್ಟಿದ್ದರು. 

ಈ ಮಧ್ಯೆ, ಜನರಲ್ ಫಿಜಿಸಿಯನ್ ಮತ್ತು ಅವರ ಪತ್ನಿ ಹಾಗೂ ಇತರೆ ನಾಲ್ವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಇವರಿಗೆ ಭೋಪಾಲ್ ನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

SCROLL FOR NEXT