ರಾಹುಲ್ ಗಾಂಧಿ 
ದೇಶ

ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶ ಭಕ್ತರು: ರಾಹುಲ್ ಶ್ಲಾಘನೆ

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.

ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ ದುಡಿಯುವುದೇ ನಿಜವಾದ ದೇಶಭಕ್ತಿ. ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರು ನಿಜವಾದ ದೇಶಭಕ್ತರು. ಮುಖ್ಯವಾಹಿನಿಯಿಂದ ದೂರವುಳಿದು ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ. 

ಭಯ ಹಾಗೂ ತಪ್ಪು ಮಾಹಿತಿಗಳು ವೈರಸ್ ಗಿಂತ ಅಪಾಯಕಾರಿಯಾಗಿರುವ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದಿದ್ದಾರೆ. 

ಒಂದು ದೇಶವಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ನಂತರ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ