ಕೊರೋನಾವೈರಸ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ: ಸೋನಿಯಾಗಾಂಧಿ
ಸೋಂಕಿನ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವನ್ನು ನಿರ್ವಹಿಸಲು ಸಿದ್ಧವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದು, ಸವಾಲನ್ನು ಎದುರಿಸಲು ಸರ್ಕಾರ ಸಮಗ್ರ ಯೋಜನೆ ರೂಪಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನವದೆಹಲಿ: ಸೋಂಕಿನ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವನ್ನು ನಿರ್ವಹಿಸಲು ಸಿದ್ಧವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಹೇಳಿದ್ದು, ಸವಾಲನ್ನು ಎದುರಿಸಲು ಸರ್ಕಾರ ಸಮಗ್ರ ಯೋಜನೆ ರೂಪಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಸಭೆಯನ್ನುದ್ದೇಶಿಸಿ ಮಾತನಾಡಿದ ಸೋನಿಯಾಗಾಂಧಿ, ಆರ್ಥಿಕತೆಯ ಮೇಲೆ ಲಾಕ್‌ಡೌನ್ ಭಾರಿ ಹೊರೆ ಬೀರಿದೆ. ಈಗಾಗಲೇ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿ ಮುಂಬರುವ ದಿನಗಳಲ್ಲಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಕೊರೋನಾ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಹೇಗೆ ತನ್ನ ಕೊಡುಗೆ ನೀಡುತ್ತದೆ ಎಂಬುದನ್ನು ಪಕ್ಷ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಪರಿಗಣಿಸಬೇಕು ಎಂದು ಸೋನಿಯಾಗಾಂಧಿ ಈ ಸಂದರ್ಭದಲ್ಲಿ ಕರೆ ನೀಡಿದರು.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 678 ಕೊವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೋನಾ ದೃಢ ಪಟ್ಟ ಪ್ರಕರಣಗಳ ಸಂಖ್ಯೆ 6,412 ಕ್ಕೆ ತಲುಪಿದ್ದು, ಒಟ್ಟು 503 ಮಂದಿ ಕೊರೋನಾ ರೋಗದಿಂದ ಚೇತರಿಸಿಕೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 33 ಮಂದಿ ಮೃತಪಟ್ಟಿದ್ದು, ಈವರೆಗೆ 199 ಜನರು ಸಾವನ್ನಪ್ಪಿದ್ದಾರೆ.