ಸಂಗ್ರಹ ಚಿತ್ರ 
ದೇಶ

ಹೈಡ್ರಾಕ್ಸಿಕ್ಲೋರೋಕ್ವಿನ್'ಗೆ ಹೆಚ್ಚಿದ ಬೇಡಿಕೆ: ಮಿತ್ರ ರಾಷ್ಟ್ರಗಳಿಗೆ ಸಹಾಯ ಮಾಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ 

ಮಹಾಮಾರಿ ಕೊರೋನಾ ವೈರಸ್ ಹತ್ತಿಕ್ಕಲು ಇಡೀ ವಿಶ್ವವೇ ಒಗ್ಗಟ್ಟಾಗಿ ನಿಂತಿದ್ದು, ಈ ನಡುವಲ್ಲೇ ವೈರಸ್ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಈ ಮದ್ದಿಗೆ ಎಲ್ಲೆಡೆ ಬೇಡಿಕೆಗಳು ಹೆಚ್ಚಾಗಿದ್ದು, ಸ್ನೇಹ ರಾಷ್ಟ್ರಗಳಿಗೆ ಸಹಾಯ ಮಾಡಲು ಭಾರತ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. 

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹತ್ತಿಕ್ಕಲು ಇಡೀ ವಿಶ್ವವೇ ಒಗ್ಗಟ್ಟಾಗಿ ನಿಂತಿದ್ದು, ಈ ನಡುವಲ್ಲೇ ವೈರಸ್ ಚಿಕಿತ್ಸೆಗಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಈ ಮದ್ದಿಗೆ ಎಲ್ಲೆಡೆ ಬೇಡಿಕೆಗಳು ಹೆಚ್ಚಾಗಿದ್ದು, ಸ್ನೇಹ ರಾಷ್ಟ್ರಗಳಿಗೆ ಸಹಾಯ ಮಾಡಲು ಭಾರತ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಸಾಂಕ್ರಾಮಿಕ ರೋಗದ ವಿರುದ್ಧ ನಾವೆಲ್ಲರೂ ಒಗ್ಗೂಡಿ ಹೋರಾಟ ನಡೆಸಬೇಕಿದೆ. ಸ್ನೇಹಯುತ ರಾಷ್ಟ್ರಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡಲು ಭಾರತದ ಸಿದ್ಧವಿದೆ. ಇಸ್ರೇಲ್'ನಲ್ಲಿರುವ ಎಲ್ಲರೂ ಉತ್ತಮ ಆರೋಗ್ಯ ಹೊಂದಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. 

ಇಸ್ರೇಲ್ ರಾಷ್ಟ್ರಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ನೀಡುವುದಾಗಿ ಭಾರತದ ಹೇಳಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತಾನ್ಯಾಹು ಅವರು, ಇಸ್ರೇಲ್ ರಾಷ್ಟ್ರಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ಮಾಡಿದ್ದಕ್ಕೆ ಭಾರತದ ಪ್ರಧಾನಮಂತ್ರಿ ಹಾಗೂ ನನ್ನ ಸ್ನೇಹಿತ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಇಸ್ರೇಲ್ ರಾಷ್ಟ್ರದ ಪ್ರತೀ ಪ್ರಜೆಗಳೂ ನಿಮಗೆ ಧನ್ಯವಾದಗಳನ್ನು ಹೇಳಲು ಬಯಸುತ್ತಾರೆಂದು ಟ್ವೀಟ್ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?