ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಏಪ್ರಿಲ್ 30 ವರೆಗೆ ಲಾಕ್ ಡೌನ್ ವಿಸ್ತರಣೆ!?: ಸರ್ಕಾರದ ಮುಂದಿನ ಯೋಜನೆಗಳು ಹೀಗಿವೆ...

ಸರ್ಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಕೊರೋನಾ ವೈರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ನ್ನು ಏ.30 ವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ
Srinivas Rao BV
Updated On : 10 Apr 2020, 11:03 pm

ನವದೆಹಲಿ: ಸರ್ಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಕೊರೋನಾ ವೈರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ನ್ನು ಏ.30 ವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಮಾ.25-ಏ.14 ವರೆಗೆ 3 ವಾರಗಳ ಲಾಕ್ ಡೌನ್ ನ್ನು ಘೋಷಿಸಿದ್ದರು. ಈ ಲಾಕ್ ಡೌನ್ ನ್ನು ಇನ್ನೂ 2 ವಾರಗಳ ಕಾಲ, ಅಂದರೆ ಏ.30 ವರೆಗೆ ವಿಸ್ತರಣೆ ಮಾಡಲಾಗುತ್ತದೆ. 

ಏ.30 ರ ನಂತರ, ಮೇ.1 ರಿಂದ ಲಾಕ್ ಡೌನ್ ಮುಕ್ತಾಯಗೊಂಡರೂ ಸಹ ಸಾರ್ವಜನಿಕ ಜೀವನ ಹಿಂದಿನ ಸ್ಥಿತಿಗೆ ಮರಳುವುದಿಲ್ಲ ಎಂದು ಸರ್ಕಾರ ನಿರ್ಧರಿಸಿದೆ. 

Advertisement

Advertisement

ಸರ್ಕಾರ ಯೋಜನೆ ಮಾಡಿರುವ ಪ್ರಕಾರ ಮೊದಲು ಮಾ.05 ರಂದು ಧಾರ್ಮಿಕ ಪ್ರದೇಶಗಳು ಪುನಾರಂಭಗೊಳ್ಳಲಿದೆ, ಮಾ.07 ರಂದು ಹಣ್ಣು ಮತ್ತು ತರಕಾರಿ ಮಾರ್ಕೆಟ್ ಗಳು ಪರ್ಯಾಯ ದಿನಗಳಲ್ಲಿ ಕಾರ್ಯನಿರ್ವಹಣೆ ಮಾಡಲಿವೆ.

ಮೇ.15 ರಿಂದ ರೈಲು, ದೇಶಿ ವಿಮಾನಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಮೇ ತಿಂಗಳ ಮೂರನೇ ವಾರದಲ್ಲಿ ಸಿನಿಮಾ ಹಾಲ್, ಮಾಲ್ ಗಳು ತೆರೆಯಲಿವೆ. ಮೇ ಅಂತ್ಯಕ್ಕೆ ಶೈಕ್ಷಣಿಕ ಸಂಸ್ಥೆಗಳು ಪುನಾರಂಭಗೊಳ್ಳಲಿವೆ. 

ಇನ್ನು ಅಂತಾರಾಷ್ಟ್ರೀಯ ವಿಮಾನಗಳನ್ನು ಜುಲೈ.30 ರಿಂದ ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಇವೆಲ್ಲವನ್ನೂ ಜಾಗತಿಕ ಮಟ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಲಾಕ್ ಡೌನ್ ಗೆ ಸಂಬಂಧಿಸಿದಂತೆ ಏ.12 ರಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments